Wednesday, May 27, 2026
Google search engine
Homeರಾಜಕೀಯಸಿಎಂ ಸ್ಥಾನಕ್ಕೆ ರಾಜೀನಾಮೆಗೆ ಸಿದ್ದರಾಮಯ್ಯ ತೀರ್ಮಾನ: ನಾಳೆ ಅಧಿಕೃತ ಘೋಷಣೆ?

ಸಿಎಂ ಸ್ಥಾನಕ್ಕೆ ರಾಜೀನಾಮೆಗೆ ಸಿದ್ದರಾಮಯ್ಯ ತೀರ್ಮಾನ: ನಾಳೆ ಅಧಿಕೃತ ಘೋಷಣೆ?

ಹೈಕಮಾಂಡ್ ಸೂಚನೆ ಮೇರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದು, ಬುಧವಾರ ಬೆಂಗಳೂರಿನಲ್ಲಿ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ.

ದೆಹಲಿಯಲ್ಲಿ ಮಂಗಳವಾರ ನಡೆದ ಹೈಕಮಾಂಡ್ ಜೊತೆಗಿನ ಸುದೀರ್ಘ ಸಭೆಯ ನಂತರ ಸಿದ್ದರಾಮಯ್ಯ ಅಧಿಕಾರ ಹಂಚಿಕೆಯ ಸೂತ್ರದಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ ಎಂದು ಹೇಳಲಾಗಿದೆ.

ರಾಹುಲ್ ಗಾಂಧಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ. ರಾಜ್ಯಸಭೆಗೆ ಸ್ಪರ್ಧಿಸುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಆದರೆ ರಾಜೀನಾಮೆ ನೀಡಲು ಸಿದ್ಧ ಆದರೆ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸುವ ಬಗ್ಗೆ ಎರಡು ದಿನ ಕಾಲವಕಾಶ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ತಮ್ಮ ಆಪ್ತ ಸಚಿವರ ಜೊತೆ ಚರ್ಚೆ ನಡೆಸಿದ್ದು,  ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ. ಬೆಂಗಳೂರಿಗೆ ಮಂಗಳವಾರ ತಡರಾತ್ರಿ ಆಗಮಿಸಲಿದ್ದು, ಬುಧವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ಇದೇ ವೇಳೆ ಕೆಸಿ ವೇಣುಗೋಪಾಲ್, ರಣದೀಪ್ ಸುರ್ಜೆವಾಲಾ ಸ್ಥಳೀಯ ಮುಖಂಡರಿಗೆ ಕರೆ ಮಾಡಿ ಮಾತುಕತೆ ನಡೆಸಿದ್ದು, ರಾಜೀನಾಮೆ ಪ್ರಕ್ರಿಯೆ, ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ.

ಇದೇ ತಿಂಗಳ 30ರಂದು ಡಿಕೆ ಶಿವಕುಮಾರ್ ಮುಖ್ಯುಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರಿಯಾಂಕ್ ಖರ್ಗೆ, ಯತೀಂದ್ರ ಸಿದ್ದರಾಮಯ್ಯ, ಜಮೀರ್ ಅಹ್ಮದ್ ಸೇರಿದಂತೆ ನಾಲ್ವರಿಗೆ ಡಿಸಿಎಂ ಸ್ಥಾನ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments