Thursday, May 28, 2026
Google search engine
Homeರಾಜಕೀಯನಾಳೆ ರಾಜೀನಾಮೆ ಪರ್ವ: ಶುಕ್ರವಾರ ಡಿಕೆ ಶಿವಕುಮಾರ್‌ ಪ್ರಮಾಣ ವಚನ?

ನಾಳೆ ರಾಜೀನಾಮೆ ಪರ್ವ: ಶುಕ್ರವಾರ ಡಿಕೆ ಶಿವಕುಮಾರ್‌ ಪ್ರಮಾಣ ವಚನ?

ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಕೆರಳಿಸಿರುವ ಅಧಿಕಾರ ಹಸ್ತಾಂತರ ಬೆಳವಣಿಗೆ ಬಗ್ಗೆ ಕಾಂಗ್ರೆಸ್‌ ಅಧಿಕೃತ ಘೋಷಣೆ ಮಾಡದೇ ಇದ್ದರೂ ಗುರುವಾರ ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಾಮೂಹಿಕ ರಾಜೀನಾಮೆ ನೀಡಲಿದ್ದು, ಶುಕ್ರವಾರ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.

ದೆಹಲಿಯಲ್ಲಿ ಹೈಕಮಾಂಡ್‌ ಜೊತೆ ಸುದೀರ್ಘ ೬ ಗಂಟೆಗಳ ಚರ್ಚೆಯ ನಂತರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ಒಪ್ಪಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಬೆಳಿಗ್ಗೆ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ಸಿದ್ದರಾಮಯ್ಯ ಗುರುವಾರ ಬೆಳಿಗ್ಗೆ ಸಚಿವರನ್ನು ಉಪಹಾರಕ್ಕೆ ಆಹ್ವಾನಿಸಿದ್ದು, ಈ ಸಂದರ್ಭದಲ್ಲಿ ಹೈಕಮಾಂಡ್‌ ಜೊತೆಗಿನ ಸಭೆಯ ಕುರಿತು ಮಾಹಿತಿ ಹಂಚಿಕೊಳ್ಳಲಿದ್ದು, ಎಲ್ಲರ ರಾಜೀನಾಮೆ ಪಡೆಯಲಿದ್ದಾರೆ. ನಂತರ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಘೋಷಿಲಿದ್ದಾರೆ. ಮಧ್ಯಾಹ್ನ ೩ ಗಂಟೆಗೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದು, ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡುವ ಸಾಧ್ಯತೆ ಇದೆ.

ರಾಜ್ಯಪಾಲರು ಅನುಮತಿ ನೀಡಿದ ಬೆನ್ಮಲ್ಲೇ ಶುಕ್ರವಾರವೇ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ಹೇಳಿವೆ. ಇದೇ ವೇಳೆ ಸಿದ್ದರಾಮಯ್ಯ ಘೋಷಣೆ ಬೆನ್ನಲ್ಲೇ ಡಿಕೆ ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿದೆ.

ಡಿಕೆ ಶಿವಕುಮಾರ್‌ ಸಿಎಂ ಪಟ್ಟ ಅಲಂಕರಿಸಿದ ನಂತರ ಸಚಿವ ಸಂಪುಟ ವಿಸ್ತರಣೆ ಮುಂತಾದ ಬೆಳವಣಿಗೆಗಳು ಮುಗಿದ ಬೆನ್ನಲ್ಲೇ ನೂತನ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್‌ ಜಾರಕಿಹೊಳಿ ನೇಮಕಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments