Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜಕೀಯ

ಡಿಕೆ ಶಿವಕುಮಾರ್ ಅವಿರೋಧ ಆಯ್ಕೆ: ಕೆಸಿ ವೇಣುಗೋಪಾಲ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 39 ವೀಕ್ಷಣೆಗಳು
dk shivakumar

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಹೆಮ್ಮೆಯಿಂದ ಹೇಳುತ್ತೇನೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಿಸಿದರು.

ವಿಧಾನಸೌಧದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬಳಿಕ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸೂಚಿಸಿತು. ಸಭೆಯಲ್ಲಿ ಹಂಗಾಮಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದ್ದು, ಕಾಂಗ್ರೆಸ್ ಶಾಸಕಾಂಗ ಸಭೆಯು ಸರ್ವಾನುಮತದಿಂದ ಒಪ್ಪಿಕೊಂಡಿತು. ಡಾ.ಜಿ. ಪರಮೇಶ್ವರ ಅವರು ಈ ಪ್ರಸ್ತಾವನೆಯನ್ನು ಅನುಮೋದಿಸಿದರು ಎಂದು ಅವರು ಹೇಳಿದರು.

ಸುಸೂತ್ರವಾಗಿ ನಡೆದ ಆಯ್ಕೆ

ಶಿವಕುಮಾರ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿ, ಮುಖ್ಯಮಂತ್ರಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ. ಜೂನ್ 3ರಂದು ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಅಧಿಕಾರ ಹಸ್ತಾಂತರದಿಂದ ಕಾಂಗ್ರೆಸ್ ಪಕ್ಷಕ್ಕೆ ಸಂಕಷ್ಟ ಎದುರಾಗಲಿದೆ ಎಂದು ಅನೇಕರು ನಿರೀಕ್ಷಿಸಿದ್ದರು. ಆದರೆ ನಮ್ಮದು ಕುಟುಂಬವಿದ್ದಂತೆ. ಎಲ್ಲರೂ ಸಿದ್ದರಾಮಯ್ಯ ಅವರ ನಡೆ ಹೇಗಿರಲಿದೆ ಎಂದು ಕೇಳುತ್ತಿದ್ದರು. ಆದರೆ ಸಿದ್ದರಾಮಯ್ಯ ಅವರು ನನ್ನ ಹೃದಯದಲ್ಲಿ ಕೇವಲ ಕಾಂಗ್ರೆಸ್ ಪಕ್ಷವಿದೆ. ಕಾಂಗ್ರೆಸ್ ಹೈಕಮಾಂಡ್ ನಿರ್ಧಾರವನ್ನು ಪಾಲಿಸುತ್ತೇನೆ ಎಂದು ಉತ್ತರ ನೀಡಿದ್ದರು. ಸಿದ್ದರಾಮಯ್ಯ ಅವರು ತಮ್ಮ ನಡೆ ಮೂಲಕ ಸಾಬೀತಪಡಿಸಿದರು. ಇದು ಕಾಂಗ್ರೆಸ್ ಒಂದು ಕುಟುಂಬ ಎಂಬುದಕ್ಕೆ ಸಾಕ್ಷಿ ಎಂದು ಬಣ್ಣಿಸಿದರು.

ಕಾಂಗ್ರೆಸ್ ಪಕ್ಷ ಮತ್ತೆ 2028ರಲ್ಲಿ ಅಧಿಕಾರಕ್ಕೆ

ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯ ಅವರ 8 ವರ್ಷಗಳ ಅತ್ಯುತ್ತಮ ಸೇವೆಯನ್ನು ಶ್ಲಾಘಿಸಲಾಗಿದೆ. ಈ ನಿರ್ಣಯವನ್ನು ಸ್ವತಃ ಡಿ.ಕೆ. ಶಿವಕುಮಾರ್ ಅವರು ಮಂಡಿಸಿದರು. ಇದು ಕಾಂಗ್ರೆಸ್ ಪಕ್ಷಕ್ಕೆ ಹೆಮ್ಮೆಯ ಕ್ಷಣ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ಮಾರ್ಗದರ್ಶನದಂತೆ ಈ ಅಧಿಕಾರ ಹಸ್ತಾಂತರ ಮಾಡಲಾಗಿದೆ. ಸಿದ್ದರಾಮಯ್ಯ ಅವರ ಬೆಂಬಲದೊಂದಿಗೆ ಡಿ.ಕೆ. ಶಿವಕುಮಾರ್ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ 2028ರಲ್ಲಿ ಅಧಿಕಾರಕ್ಕೆ ಬರಲಿದೆ” ಎಂದು ಭವಿಷ್ಯ ನುಡಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment