ಅಹಮದಾಬಾದ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಫೈನಲ್ ನಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ರಜತ್ ಪಟಿದಾರ್ ಎದುರಾಳಿ ಗುಜರಾತ್ ಟೈಟಾನ್ಸ್ ತಂಡವನ್ನು ಮೊದಲು ಬ್ಯಾಟ್ ಮಾಡುವಂತೆ ಆಹ್ವಾನಿಸಿದ್ದು, ರನ್ ಚೇಸ್ ಮಾಡಲು ತೀರ್ಮಾನಿಸಿದ್ದಾರೆ.
ಕಳೆದ ವರ್ಷ ಇದೇ ಮೈದಾನದಲ್ಲಿ ಪ್ರಶಸ್ತಿ ಗೆದ್ದು 17 ವರ್ಷಗಳ ಪ್ರಶಸ್ತಿ ಬರ ನೀಗಿಸಿಕೊಂಡಿತ್ತು. ಇದೀಗ ಆರ್ ಸಿಬಿ ಮತ್ತೆ ಇದೇ ಮೈದಾನದಲ್ಲಿ ಮತ್ತೊಮ್ಮೆ ಪ್ರಶಸ್ತಿ ಗೆಲ್ಲುವ ಭರವಸೆಯೊಂದಿಗೆ ಕಣಕ್ಕಿಳಿದಿದೆ.
ಪ್ಲೇಆಫ್ ಸುತ್ತಿನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆಡಿದ ಆಟಗಾರರನ್ನೇ ಉಳಿಸಿಕೊಳ್ಳಲಾಗಿದ್ದು, ಯಾವುದೇ ಬದಲಾವಣೆ ಮಾಡಲಾಗಿಲ್ಲ.
ಮತ್ತೊಂದೆಡೆ ಗುಜರಾತ್ ಟೈಟಾನ್ಸ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಸಾಯಿ ಕಿಶೋರ್ ಬದಲು ಅರ್ಷದ್ ಖಾನ್ ಅವರಿಗೆ ಅವಕಾಶ ನೀಡಲಾಗಿದೆ.
ಪೂರ್ಣ 40 ಓವರ್ ಗಳ ಕಾಲ ಪಿಚ್ ಯಥಾಸ್ಥಿತಿಯಲ್ಲಿದ್ದು, ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅನಿಸುತ್ತಿದೆ. ಆದ್ದರಿಂದ ಬ್ಯಾಟಿಂಗ್ ಗೆ ಯೋಗ್ಯವಾದ ಪಿಚ್ ನಲ್ಲಿ ಚೇಸ್ ಮಾಡಲು ನಿರ್ಧರಿಸಿದ್ದೇವೆ ಎಂದು ಆರ್ ಸಿಬಿ ತಂಡದ ನಾಯಕ ರಜತ್ ಪಟಿದಾರ್ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.



