Friday, June 5, 2026
Google search engine
Homeದೇಶಮಲ್ಲಿಕಾರ್ಜುನ ಖರ್ಗೆ, ರೆಹಮಾನ್‌ ಖಾನ್‌ ಪುತ್ರ ಸೇರಿ 7 ಮಂದಿಗೆ ರಾಜ್ಯಸಭಾ ಟಿಕೆಟ್‌ ಘೋಷಣೆ

ಮಲ್ಲಿಕಾರ್ಜುನ ಖರ್ಗೆ, ರೆಹಮಾನ್‌ ಖಾನ್‌ ಪುತ್ರ ಸೇರಿ 7 ಮಂದಿಗೆ ರಾಜ್ಯಸಭಾ ಟಿಕೆಟ್‌ ಘೋಷಣೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಕೇಂದ್ರ ಸಚಿವ ರೆಹಮಾನ್‌ ಖಾನ್‌ ಪುತ್ರ ಮನ್ಸೂರ್‌ ಅಲಿಖಾನ್‌ ಸೇರಿ 7 ಮಂದಿಗೆ ಕಾಂಗ್ರೆಸ್‌ ರಾಜ್ಯಸಭಾ ಟಿಕೆಟ್‌ ಘೋಷಣೆ ಮಾಡಿದೆ.

ಜೂನ್‌ 18ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಟಿಕೆಟ್‌ ಘೋಷಣೆಯಾಗಿದ್ದು, ಜೂನ್‌ 5ರಂದು ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ರಾಹುಲ್‌ ಗಾಂಧಿ ಸಾಥ್‌ ನೀಡಲಿದ್ದಾರೆ ಎಂದು ಮೂಲಗಳು ಹೇಳಿವೆ.

ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ ಅಲ್ಲದೇ ಮಾಜಿ ಕೇಂದ್ರ ಸಚಿವ ರೆಹಮಾನ್‌ ಖಾನ್‌ ಪುತ ಮನ್ಸೂರ್‌ ಅಲಿ ಖಾನ್‌ ಮತ್ತು ಪಕ್ಷದ ಪ್ರಚಾರ ಹಾಗೂ ಮಾಧ್ಯಮ ಉಸ್ತುವಾರಿ ಪವನ್‌ ಖೇರಾ ಅವರಿಗೆ ಟಿಕೆಟ್‌ ನೀಡಿದೆ.

ಕಾಂಗ್ರೆಸ್‌ ಮಾಧ್ಯಮ ವಕ್ತಾರ ಕೆ.ಸಿ. ವೇಣುಗೋಪಾಲ್‌ ಮಾಜಿ ಸಂಸದೆ ಮೀನಾಕ್ಷಿ ನಟರಾಜನ್‌ ಅವರಿಗೆ ಮಧ್ಯಪ್ರದೇಶದಿಂದ ಟಿಕೆಟ್‌ ನೀಡಿರುವುದನ್ನು ಖಚಿತಪಡಿಸಿದ್ದಾರೆ.

ಪಕ್ಷದ ಅಂಕಿ-ಅಂಶ ವಿಭಾಗದ ಮುಖ್ಯಸ್ಥ ಪ್ರವೀಣ್‌ ಚಕ್ರವರ್ತಿ, ರಾಜಸ್ಥಾನದಿಂದ ಧೀರಜ್‌ ದಂಗಿ ಅವರಿಗೆ ಟಿಕೆಟ್‌ ನೀಡಿದೆ. ಟಿವಿಕೆ ಪಕ್ಷ ತಮಗೆ ಸಿಕ್ಕಿದ್ದ ಒಂದು ರಾಜ್ಯಸಭಾ ಸ್ಥಾನವನ್ನು ಕಾಂಗ್ರೆಸ್‌ ಗೆ ಬಿಟ್ಟುಕೊಟ್ಟಿದೆ. ಈ ಮೂಲಕ ಕಾಂಗ್ರೆಸ್‌ ಸದಸ್ಯರು ತಮಿಳುನಾಡನ್ನು ಪ್ರತಿನಿಧಿಸಲಿದ್ದಾರೆ.

ಕಾಂಗ್ರೆಸ್‌ ಪಕ್ಷದ ರಾಜ್ಯಾಧ್ಯಕ್ಷ ಪವನ್‌ ಜಾ ಅವರನ್ನು ಜಾರ್ಖಂಡ್‌ ನಿಂದ ಸ್ಪರ್ಧಿಸಲಿದ್ದಾರೆ. ಜೂನ್‌ 18ರಂದು ಮತದಾನ ನಡೆಯಲಿದ್ದು, ಜೂನ್‌ 8 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments