ತಮಿಳುನಾಡು ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ನೀಡಿದ್ದ ರಾಜೀನಾಮೆಯನ್ನು ಅಂಗೀಕರಿಸಿದ ಬಿಜೆಪಿ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದು ಹೇಳಿಕೆ ನೀಡಿದೆ.
ಕೆಲವು ದಿನಗಳ ಹಿಂದೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಅಣ್ಣಾಮಲೈ ಅವರ ಮನವೊಲಿಕೆ ಯತ್ನ ವಿಫಲವಾಗಿದ್ದು, ಕೊನೆಗೂ ಶುಕ್ರವಾರ ರಾಜೀನಾಮೆ ಅಂಗೀಕರಿಸಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ರಾಜೀನಾಮೆ ಅಂಗೀಕರಿಸಿದ್ದಾರೆ. ನಂತರ ಹೇಳಿಕೆ ಬಿಡುಗಡೆ ಮಾಡಿದ ಪಕ್ಷ, ಅಣ್ಣಾಮಲೈ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಿದೆ.
೪೧ ವರ್ಷದ ಅಣ್ಣಾಮಲೈ ಮುಕ್ತವಾಗಿ ಪಕ್ಷದ ಮುಖಂಡರೊಂದಿಗೆ ಚರ್ಚಿಸಿದ್ದೇನೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಬಿಜೆಪಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ಅಣ್ಣಾಮಲೈ ಪಕ್ಷ ತೊರೆದಿದ್ದರಿಂದ ಯಾವುದೇ ನಷ್ಟವಿಲ್ಲ ಎಂದು ಹೇಳಿದೆ.
ಅಣ್ಣಾಮಲೈ ಬಿಜೆಪಿ ತೊರೆದು ತಮಿಳುನಾಡಿನಲ್ಲಿ ಸ್ವಂತ ಪಕ್ಷ ಸ್ಥಾಪನೆ ಮಾಡಲಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅವರು ಸಾಕಷ್ಟು ಸಿದ್ಧತೆ ಮಾಡಿಕೊಂಡಿದ್ದು, ಇನ್ನೆರಡು ದಿನಗಳಲ್ಲಿ ಅಧಿಕೃತವಾಗಿ ಪಕ್ಷವನ್ನು ಘೋಷಿಸಲಿದ್ದಾರೆ ಎಂದು ಹೇಳಲಾಗಿದೆ.



