ಇಬ್ಬರು ವಯಸ್ಕರ ನಡುವಿನ ವಿವಾಹ ಪೂರ್ವ ದೈಹಿಕ ಸಂಬಂಧ ಅವರ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿ ಅಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
ತೆಲಂಗಾಣದಲ್ಲಿ ನಡೆದ ಪೊಲೀಸ್ ಹುದ್ದೆ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯ ಚಾರಿತ್ರ್ಯ ಕುರಿತು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿವಾಹಪೂರ್ವ ದೈಹಿಕ ಸಂಬಂಧದಿಂ ವ್ಯಕ್ತಿಯ ವ್ಯಕ್ತಿತ್ವ ಅಥವಾ ಚಾರಿತ್ರ್ಯ ಕುರಿತು ನಿರ್ಧರಿಸಲು ಸಾಧ್ಯವಿಲ್ಲ ಎಂದು ಹೇಳಿದೆ.
ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ವಿಭಾಗೀಯ ಪೀಠ, 2014ರಲ್ಲಿ ಕ್ರಿಮಿನಲ್ ಕೇಸ್ ಇದೆ ಎಂಬ ಕಾರಣಕ್ಕೆ ಕಾನ್ ಸ್ಟೇಬಲ್ ಹುದ್ದೆಗೆ ಆಗಿದ್ದ ನೇಮಕಾತಿಯನ್ನು ರದ್ದುಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು.
ಮದುವೆ ಆಗುವುದಾಗಿ ನಂಬಿಸಿ ವ್ಯಕ್ತಿ ಯುವತಿ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದ. ಈ ಹಿನ್ನೆಲೆಯಲ್ಲಿ ಕುಟುಂಬದವರು ಸಲ್ಲಿಸಿದ್ದ ದೂರಿನ ಅನ್ವಯ ಕ್ರಿಮಿನಲ್ ಕೇಸ್ ದಾಖಲಾಗಿದ್ದು, 2015ರ ಲೋಕಸಭಾ ಚುನಾವಣೆ ವೇಳೆ ರಾಜೀ ನಡೆದು ಪ್ರಕರಣ ವಾಪಸ್ ಪಡೆಯಲಾಗಿತ್ತು.
ಇಬ್ಬರು ವಯಸ್ಕರು ದೈಹಿಕ ಸಂಬಂಧ ಹೊಂದುವುದು ಅವರ ವ್ಯಕ್ತಿತ್ವ ಅಥವಾ ಚಾರಿತ್ರ್ಯ ನಿರ್ಧರಿಸುವುದಿಲ್ಲ. ಇಂತಹ ಸಂಬಂಧಗಳನ್ನು ತಡೆಯಲು ಯಾವುದೇ ನಿರ್ದಿಷ್ಟ ಕಾನೂನು ಇಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.



