ಮನೆಯಲ್ಲಿ ಮಹಿಳೆ ಮತ್ತು ಸಾಕು ನಾಯಿ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಶಿವಮೊಗ್ಗದ ರವೀಂದ್ರ ನಗರದಲ್ಲಿ ಪತ್ತೆಯಾಗಿದೆ.
ರವೀಂದ್ರ ನಗರದ 1ನೇ ಅಡ್ಡರಸ್ತೆಯ ಮನೆಯಲ್ಲಿ ಘಟನೆ ನಡೆದಿದೆ. ಮೃತರನ್ನು ಪ್ರಭಾವತಿ (57) ಎಂದು ಗುರುತಿಸಲಾಗಿದೆ. ಕೆಲವು ದಿನದ ಹಿಂದೆ ಮಹಿಳೆ ಮೃತಪಟ್ಟಿದ್ದಾರೆ. ಅವರ ಸಾಕು ನಾಯಿ ಕೂಡ ಮನೆಯ ಒಳಗೆ ಸಾವನ್ನಪ್ಪಿದೆ.
ಶನಿವಾರ ಬೆಳಿಗ್ಗೆ ಅಕ್ಕಪಕ್ಕದ ಮನೆಯವರಿಗೆ ವಾಸನೆ ಬಂದ ಹಿನ್ನೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜಯನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆಯ ಸಂಭವಿಸಿದೆ.



