Sunday, June 14, 2026
Google search engine
Homeರಾಜ್ಯಗ್ಯಾರಂಟಿ ಯೋಜನೆಗಳಿಗೆ ಮರು ಅರ್ಜಿ ಆಹ್ವಾನ: ಸಿಎಂ ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳಿಗೆ ಮರು ಅರ್ಜಿ ಆಹ್ವಾನ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಹೀಗಾಗಿ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪುತ್ತಿದೆಯೇ ಇಲ್ಲವೇ ಎಂದು ಪರಿಷ್ಕರಣೆ ಮಾಡಲು ಸರ್ಕಾರ ಮುಂದಾಗಿದೆ. ಹೀಗಾಗಿ ಎಲ್ಲಾ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸಬೇಕಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಻ವರು, ಈಗಾಗಲೇ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಪ್ರಕ್ರಿಯೆ ಆರಂಭವಾಗಿದೆ. ಇದರ ಜೊತೆಗೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಲ್ಲಿ ಕೆಲವರು ನಿಧನರಾಗಿದ್ದು, ಅವರ ಹೆಸರಲ್ಲಿ ಬೇರೆಯವರು 100 ಕೋಟಿಗೂ ಹೆಚ್ಚು ಹಣ ಪಡೆದಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದರು.

ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪುತ್ತಿದೆಯೇ ಇಲ್ಲವೇ ಎಂದು ಪರಿಷ್ಕರಣೆ ಮಾಡಲು ಸರ್ಕಾರ ಮುಂದಾಗಿದೆ. ಹೀಗಾಗಿ ಎಲ್ಲಾ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸಬೇಕಾಗಿದೆ. ನಾವು ಈ ಯೋಜನೆಯನ್ನು ನಿಲ್ಲಿಸುವುದಿಲ್ಲ. ಯಾರನ್ನೂ ತೆಗೆದುಹಾಕುವ ಉದ್ದೇಶ ಸರ್ಕಾರಕ್ಕಿಲ್ಲ. ಸರಿಯಾದ ಮಾಹಿತಿ ನೀಡುವ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಬೇಕು ಎಂಬುದು ಸರ್ಕಾರದ ಉದ್ದೇಶ ಎಂದು ಅವರು ಸ್ಪಷ್ಟಪಡಿಸಿದರು.

ಗೃಹಲಕ್ಷ್ಮಿ ಯೋಜನೆಯಲ್ಲೂ 1.64 ಲಕ್ಷ ಫಲಾನುಭವಿಗಳಿದ್ದು, ಅವರು ಮತ್ತೆ ಅರ್ಜಿ ಹಾಕಬೇಕಿದೆ. ಒಬ್ಬರ ಹೆಸರಿನಲ್ಲಿ ಐದಾರು ಮೀಟರ್ ಗಳಿದ್ದು, ಆ ಮನೆಯಲ್ಲಿ ಅವರೇ ವಾಸವಿದ್ದಾರಾ? ಬೇರೆಯವರು ಇದ್ದಾರ? ಈ ಯೋಜನೆ ನಮ್ಮ ರಾಜ್ಯದವರಿಗೆ ಸಿಗುತ್ತಿದೆಯೇ, ಬೇರೆ ರಾಜ್ಯದವರಿಗೆ ಸಿಗುತ್ತಿದೆಯೇ ಎಂದು ಪರಿಶೀಲನೆ ಮಾಡಬೇಕಿದೆ. ಫಲಾನುಭವಿಗಳಿಗೆ ನಾವು ಗುರುತಿನ ಚೀಟಿ ನೀಡಬೇಕಾಗಿದೆ. ಕೆಲವೇ ದಿನಗಳಲ್ಲಿ ಅರ್ಜಿ ನೀಡಲಾಗುವುದು” ಎಂದು ವಿವರಿಸಿದರು.

ಗ್ಯಾರಂಟಿ ಯೋಜನೆಗಳಿಗೆ ಮತ್ತೆ ಅರ್ಜಿ ಸಲ್ಲಿಸುವ ಬಗ್ಗೆ ಕೇಳಿದಾಗ, “ಈ ಯೋಜನೆ ಲಾಭ ಪಡೆಯುತ್ತಿರುವವರು ಮನೆಯ ನಿಜವಾದ ಯಜಮಾನಿಯೇ ಎಂದು ತಿಳಿದುಕೊಳ್ಳಬೇಕಲ್ಲವೇ? ಒಂದು ಮನೆಗೆ ಒಬ್ಬರು ಮನೆ ಯಜಮಾನಿಯರನ್ನು ಆಯ್ಕೆ ಮಾಡಿಕೊಳ್ಳಬೇಕು. ಒಂದೇ ಮನೆಯಲ್ಲಿ ಇಬ್ಬರು ಮೂವರು ಯಜಮಾನಿಯರಿದ್ದಾರೆ ಅದನ್ನು ಪರಿಶೀಲನೆ ಮಾಡುತ್ತೇವೆ” ಎಂದು ತಿಳಿಸಿದರು.

ಗ್ರಾಮೀಣ ಭಾಗದ ಶಿಕ್ಷಣಕ್ಕೆ ಸಿಎಸ್ಆರ್ ನಿಧಿ ಬಳಕೆಗೆ ನೀತಿ ರಚನೆ

ನಾವು ನೂತನ ಸಿಎಸ್ಆರ್ ನೀತಿ ತರುತ್ತಿದ್ದೇವೆ. ಕಂಪನಿಗಳು ತಮ್ಮ ವಾರ್ಷಿಕ ಆದಾಯದ 2% ಹಣವನ್ನು ಸಿಎಸ್ಆರ್ ಉದ್ದೇಶಕ್ಕೆ ಬಳಸಿಕೊಳ್ಳಬೇಕು ಎಂಬ ನಿರ್ದೇಶನವಿದೆ. ಈ ನಿಧಿಯನ್ನು ಗ್ರಾಮೀಣ ಭಾಗದ ಶಾಲೆಗಳ ನಿರ್ಮಾಣಕ್ಕೆ ಬಳಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ಹಳ್ಳಿಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಬೇಕಾದ ಮೂಲಸೌಕರ್ಯ ಒದಗಿಸಲು ತೀರ್ಮಾನಿಸಲಾಗಿದೆ. ಖಾಸಗಿ ಶಾಲೆಗಳು ಈ ಗ್ರಾಮೀಣ ಭಾಗದ ಶಾಲೆಗಳನ್ನು ದತ್ತು ತೆಗೆದುಕೊಳ್ಳಬೇಕು. ಸರ್ಕಾರಿ ಶಾಲೆಗಳಲ್ಲಿ ನಗರ ಪ್ರದೇಶದಲ್ಲಿ ಸಿಗುವ ಶಿಕ್ಷಣ, ಸಿಗುವಂತೆ ಮಾಡಬೇಕು. ನಮ್ಮ ಜಿಲ್ಲೆಯಲ್ಲಿ 20 ಶಾಲೆಗಳನ್ನು ನಿರ್ಮಿಸಲು ಮುಂದಾಗಿದ್ದೇವೆ. ಕಂಪನಿಗಳು ತಮ್ಮ ಸಿಎಸ್ಆರ್ ನಿಧಿಯ ಹಣವನ್ನು ಸರ್ಕಾರಕ್ಕೆ ನೀಡುವುದು ಬೇಡ, ಸರ್ಕಾರ ನೀಡುವ ಮಾದರಿಯಲ್ಲಿ ಶಾಲೆಗಳನ್ನು ನಿರ್ಮಿಸಿಕೊಟ್ಟರೆ ಸಾಕು. ಇದು ಸಂಪೂರ್ಣ ಸರ್ಕಾರಿ ಶಾಲೆಯಾಗಿರುತ್ತವೆ ಎಂದರು.

ನನ್ನ ಕನಸಿನ ಕಾರ್ಯಕ್ರಮ ಭಾರತ ಜೋಡೋ ಯುವಕರ ಸಂಘ ನಿರ್ಮಿಸಲು ಮುಂದಾಗಿದ್ದೇವೆ. ರಾಜ್ಯದಲ್ಲಿ 6000 ಗ್ರಾಮ ಪಂಚಾಯ್ತಿಗಳಿದ್ದು, 4 ಸಾವಿರ ನಗರ ಪ್ರದೇಶದ ವಾರ್ಡ್ ಗಳಿವೆ. ಈ ಭಾಗದಲ್ಲಿ ಯುವಕರ ಸೌಹಾರ್ದತೆಗೆ ಹಾಗೂ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸಲು ಈ ಕಾರ್ಯಕ್ರಮ ರೂಪಿಸಲಾಗಿದೆ. ಇದು ರಾಜಕೀಯೇತ್ತರ ಸಂಘಗಳಾಗಿದ್ದು, 16 ವರ್ಷಗಳಿಂದ 35 ಅತವಾ 40 ವರ್ಷವರೆಗಿನವರು ಈ ಸಂಘಗಳ ಸದಸ್ಯರಾಗಬಹುದು. ವಯೋಮಿತಿಯನ್ನು ಶೀಘ್ರವೇ ತೀರ್ಮಾನಿಸಲಾಗುವುದು. ಕ್ರೀಡೆ, ಸಾಂಸ್ಕೃತಿಕ, ನಾಯಕತ್ವ ಪ್ರತಿಭೆ ಹೆಚ್ಚಿಸಲು ಅವಕಾಶ ಕಲ್ಪಿಸಲಾಗುವುದು. ರಾಜಕೀಯ ಹಸ್ತಕ್ಷೇಪವಿಲ್ಲದೇ ಸಂಘಗಳ ರಚನೆಗೆ ಶೀಘ್ರವೇ ಮಾರ್ಗಸೂಚಿ ಹೊರಡಿಸಲಾಗುವುದು. ಪ್ರತಿ ಸಂಘಕ್ಕೆ ವಾರ್ಷಿಕ 10 ಲಕ್ಷ ಅನುದಾನ ನೀಡಲಾಗುವುದು ಎಂದು ಹೇಳಿದರು.

ಭಾರತ ಜೋಡೋ ಕಾರ್ಯಕ್ರಮ ರಾಜಕೀಯ ಕಾರ್ಯಕ್ರಮ ಎಂದು ಹೇಳಿದ್ದು ಯಾರು? ದೇಶವನ್ನು ಹಾಗೂ ಜನರ ಹೃದಯ ಒಂದುಗೂಡಿಸುವುದು, ಸಮಾಜವನ್ನು ಶಾಂತಿಯ ತೋಟವಾಗಿ ಮಾಡುವುದು ರಾಜಕೀಯ ಕ್ರಮವೇ? ಕುವಂಪು ಅವರ ಸರ್ವಜನಾಂಗದ ಶಾಂತಿಯ ತೋಟ ಎಂಬ ಸಂದೇಶ ರಾಜಕೀಯ ಕ್ರಮವೇ? ಎಂದು ಪ್ರಶ್ನಿಸಿದರು.

ಭ್ರಷ್ಟಾಚಾರಕ್ಕೆ ಕಡಿವಾಣ

ಭ್ರಷ್ಟಾಚಾರ ನಿಯಂತ್ರಿಸುವ ಕ್ರಮವನ್ನು ಮೇಲ್ವಿಚಾರಣೆ ಮಾಡುವವರು ಯಾರು ಎಂದು ಕೇಳಿದಾಗ, ತಳಮಟ್ಟದಿಂದ ಸರಿಪಡಿಸಬೇಕಾಗಿದೆ. ಹಳ್ಳಿಯಿಂದ ವಿಧಾನಸೌಧದವರೆಗೆ ಅದೇ ಪದ್ಧತಿಯಲ್ಲಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಅಧಿಕಾರಿಗಳಲ್ಲಿ ಪರ್ಸೆಂಟೇಜ್ ಮಟ್ಟದಲ್ಲಿ ಕಮಿಷನ್ ಪಡೆಯಲಾಗುತ್ತಿದ್ದು, ನೀವು ಇದನ್ನು ಎಷ್ಟು ಪರ್ಸೆಂಟ್ ಗೆ ನಿಯಂತ್ರಿಸುತ್ತೀರಿ ಎಂದು ಕೇಳಿದಾಗ, ಯಾವ ಪರ್ಸೆಂಟೇಜ್ ಇಲ್ಲ, 0 ಪರ್ಸೆಂಟೇಜ್ ಗೆ ತರುತ್ತೇವೆ ಎಂದು ತಿಳಿಸಿದರು.

ಯುವಕರಿಗೆ ಪ್ರೋತ್ಸಾಹ ನೀಡಲು ವಿವಿಧ ಇಲಾಖೆಗಳಿವೆ. ಆದರೂ ಈ ಸಂಘಗಳೇಕೆ ಎಂದು ಕೇಳಿದಾಗ “ಈ ಎಲ್ಲಾ ಇಲಾಖೆಗಳು ಈ ಕಾರ್ಯಕ್ರಮದಲ್ಲಿ ಕೈಜೋಡಿಸಲಿವೆ. ಈ ಕಾರ್ಯಕ್ರಮಕ್ಕೆ ರೂಪುರೇಷ ಕೊಟ್ಟ ಬಳಿಕ ಎಲ್ಲವನ್ನು ವಿವರವಾಗಿ ತಿಳಿಸುತ್ತೇನೆ” ಎಂದರು.

ನಾನು ಈ ವಿಚಾರವಾಗಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ವರದಿ ಬಂದ ಬಳಿಕ ಯಾರು ಕಾನೂನು ಬಾಹೀರವಾಗಿ ನಡೆಸುತ್ತಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಬಹುದು. ಕಾನೂನು ಚೌಕಟ್ಟಿನಲ್ಲಿ ನಡೆಸುವವರಿಗೆ ನಾವು ಏನೂ ಮಾಡಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಕೆಲವು ತೀರ್ಮಾನ ಮಾಡಿ ಅವಕಾಶ ಕೊಟ್ಟಿದೆ. ಅದರ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದಾರಾ ಇಲ್ಲವೇ ಎಂದು ಪರಿಶೀಲನೆ ಮಾಡಲಾಗುವುದು. ಈ ಬಗ್ಗೆ ಜನರಲ್ಲೂ ಜಾಗೃತಿ ಮೂಡಿಸುತ್ತೇವೆ” ಎಂದು ತಿಳಿಸಿದರು.

ರಸಗೊಬ್ಬರ ಕೊರತೆ ವಿಚಾರವಾಗಿ ನಾವು ಚರ್ಚೆ ಮಾಡಿದ್ದು, ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸುತ್ತೇವೆ. ಪ್ರಧಾನಮಂತ್ರಿಗಳು ಈ ವಿಚಾರವಾಗಿ ಹೇಳಿದ್ದಾರೆ. ನಾವು ಈ ಬಗ್ಗೆ ಸಭೆ ಮಾಡಿದ್ದೇವೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡಬೇಕು. ನಾವು ಅವರೊಂದಿಗೆ ಸಂಪರ್ಕ ಹೊಂದಿದ್ದು, ಒತ್ತಡ ಹಾಕುತ್ತಿದ್ದೇವೆ. ಅವರು ಯುದ್ಧದ ಕಾರಣ ಹೇಳುತ್ತಿದ್ದಾರೆ. ಇದಕ್ಕಾಗಿ ಪ್ರಧಾನಿ ಸಾವಯವ ಗೊಬ್ಬರ ಬಳಕೆಗೆ ಕರೆ ನೀಡಿದ್ದಾರೆ. ರಸಗೊಬ್ಬರ ಕಡಿಮೆ ಬಳಕೆಗೆ ಸಲಹೆ ನೀಡಿದ್ದಾರೆ. ಅವರು ತಮ್ಮದೇ ಆದ ಕ್ರಮಗಳನ್ನು ತಿಳಿಸಿದ್ದಾರೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments