Wednesday, June 17, 2026
Google search engine
Homeರಾಜ್ಯಧರ್ಮಸ್ಥಳದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಅಧಿಕಾರಿಗಳ ಕಾರು ಪಲ್ಟಿ: ನಾಲ್ವರು ಪಾರು

ಧರ್ಮಸ್ಥಳದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಅಧಿಕಾರಿಗಳ ಕಾರು ಪಲ್ಟಿ: ನಾಲ್ವರು ಪಾರು

ಮಂಗಳೂರು (ಬೆಳ್ತಂಗಡಿ): ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾಮಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳವಾರ ಸಂಭವಿಸಿದೆ.

ಎಸ್‌ಐಟಿ ಕಚೇರಿಯಿಂದ ಎಸ್ಪಿ ಸಿ.ಎ. ಸೈಮನ್, ಇನ್‌ಸ್ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮುಂಬನಾಥ್ ಹಾಗೂ ಚಿಕ್ಕಮಗಳೂರು ಜಿಲ್ಲಾ ಎಸ್‌ಪಿ ಮತ್ತು ಎಸ್‌ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮು ಧರ್ಮಸ್ಥಳ ಪ್ರಕರಣದ ಸಾಕ್ಷಿ ಚೆನ್ನಯ್ಯ ಹೈಕೋರ್ಟ್ ಗೆ ಸಲ್ಲಿಸಿರುವ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಲು ತೆರಳುತ್ತಿದ್ದರು.

ಪ್ರಯಾಣದ ವೇಳೆ ಚಾರ್ಮಾಡಿ ಘಾಟ್‌ನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯ ವೇಳೆ ಕಾರಿನಲ್ಲಿ ಚಾಲಕ ಸೇರಿದಂತೆ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಘಟನೆಯ ಕುರಿತು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಅಪಾಯದಿಂದ ಪಾರಾದ ಅಧಿಕಾರಿಗಳು

ಧರ್ಮಸ್ಥಳ ಪ್ರಕರಣದ ತನಿಖೆಯಲ್ಲಿ ತೊಡಗಿರುವ ಎಸ್‌ಐಟಿ ತಂಡದ ಪ್ರಮುಖ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ವಾಹನ ಪಲ್ಟಿಯಾದರೂ, ಎಲ್ಲರೂ ಸುರಕ್ಷಿತವಾಗಿ ಪಾರಾಗಿದ್ದಾರೆ. ವಾಹನಕ್ಕೆ ಹಾನಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments