Thursday, July 2, 2026
Google search engine
Homeಕಾನೂನುರಾಜ್ಯ ಸರ್ಕಾರಕ್ಕೆ ಮುಖಭಂಗ: 52 ಕ್ರಿಮಿನಲ್ ಕೇಸ್ ವಾಪಸ್ ಆದೇಶಕ್ಕೆ ಹೈಕೋರ್ಟ್ ತಡೆ

ರಾಜ್ಯ ಸರ್ಕಾರಕ್ಕೆ ಮುಖಭಂಗ: 52 ಕ್ರಿಮಿನಲ್ ಕೇಸ್ ವಾಪಸ್ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ.

ಬೆಂಗಳೂರಿನ ವಕೀಲ ಗಿರೀಶ್‌ ಭಾರದ್ವಾಜ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಕೆ ಎಸ್ ಹೇಮಲೇಖಾ ಅವರನ್ನೊಳಗೊಂಡ ಠ ಸರ್ಕಾರದ ಆದೇಶಕ್ಕೆ ತಡೆ ನೀಡಿ ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಗೃಹ ಇಲಾಖೆ ಮತ್ತು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಸೆಪ್ಟಂಬರ್ 28ಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಮೂವರು ಹಿರಿಯ ಸಚಿವರ ಶಿಫಾರಸ್ಸಿನ ಆಧಾರದಲ್ಲಿ ರಾಜ್ಯದ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಪ್ರಾಸಿಕ್ಯೂಷನ್ ಹಿಂಪಡೆದಿದೆ. ಈ ಸಂಬಂಧ 2025ರಲ್ಲಿ ಇದೇ ನ್ಯಾಯಾಲಯ ಹೊರಡಿಸಿರುವ ಆದೇಶಕ್ಕೆ ವಿರುದ್ಧವಾದ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಆದ್ದರಿಂದ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಬೇಕು ಎಂದು ಪೀಠಕ್ಕೆ ವಿವರಿಸಿದರು.

ಸರ್ಕಾರದ ಪರ ವಕೀಲರು, ಸ್ವಲ್ಪ ಕಾಲಾವಕಾಶ ನೀಡಿದರೆ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ಈ ವೇಳೆ ಪೀಠ, ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸಮಯ ನೀಡಲಾಗುವುದು. ಅಲ್ಲಿಯವರಿಗೆ ಸರ್ಕಾರದ ಆದೇಶಕ್ಕೆ ತಡೆ ನೀಡಲಾಗುವುದು ಎಂದು ತಿಳಿಸಿತು.

ಅರ್ಜಿಯಲ್ಲಿ ಮೂರನೇ ಪ್ರತಿವಾದಿಯಾಗಿರುವ ಆರೋಗ್ಯ ಸಚಿವ ಯು ಟಿ ಖಾದರ್‌ ಅವರಿಗೆ ನೋಟಿಸ್ ಜಾರಿಗೊಳಿಸಲು ನಿರಾಕರಿಸಿದ ನ್ಯಾಯಪೀಠ, ಸದನದಲ್ಲಿ ಶಾಸಕರು ನೀಡುವ ಹೇಳಿಕೆಗೆ ವಿನಾಯಿತಿ ಇರುತ್ತದೆ. ಇದನ್ನು ಆಧರಿಸಿ ಅವರನ್ನು ಪ್ರತಿವಾದಿ ಮಾಡುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಿತು.

ಪ್ರಕರಣದ ಹಿನ್ನೆಲೆ

2026ರ ಮೇ 21ರಂದು ನಡೆದ ರಾಜ್ಯ ಸಂಪುಟ ಸಭೆಯಲ್ಲಿ 52 ಪ್ರಕರಣಗಳನ್ನು ಹಿಂಪಡೆಯುವ ಪ್ರಸ್ತಾವನೆಗೆ ಅನುಮೋದನೆ ನೀಡಿತ್ತು. ಅದರಂತೆ ಮೇ 27 ರಂದು ಗೃಹ ಇಲಾಖೆ ಪ್ರಕರಣಗಳನ್ನು ಹಿಂಪಡೆಯುವಂತೆ ಸರ್ಕಾರಿ ಅಭಿಯೋಜಕರಿಗೆ ನಿರ್ದೇಶನ ನೀಡಿ ಆದೇಶ ಹೊರಡಿಸಿತ್ತು. ಈ ಆದೇಶ ಹಾಗೂ ಸಚಿವ ಸಂಪುಟದ ತೀರ್ಮಾನವನ್ನು ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments