ಕೇರಳದ ವಯನಾಡಿನಲ್ಲಿ ಸುರಿದ ಭಾರೀ ಮಳೆಯಿಂದ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಮಂಗಳವಾರ ಬೆಳಿಗ್ಗೆ ಭಾರೀ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಇದೆ. ರಕ್ಷಣಾ ಪಡೆಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಆವಶೇಷಗಳಡಿ ಸಿಲುಕಿರುವವ ರಕ್ಷಣೆಗೆ ಮುಂದಾಗಿದೆ.
ವಯನಾಡು ಜಿಲ್ಲೆಯ ಕಲ್ಲಾಡಿ ಬಳಿಯ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ. ಮಲ್ಲಾಪುರಂ ಮತ್ತು ವಯನಾಡು ಸಂಪರ್ಕ ಕಲ್ಪಿಸಲು ನಡೆದಿರುವ ಸುರಂಗ ಮಾರ್ಗದ ಕಾಮಗಾರಿ ಬಳಿ ಈ ದುರಂತ ಸಂಭವಿಸಿದ್ದು, ಘಟನೆ ವೇಳೆ ಹಲವಾರು ಕಾರ್ಮಿಕರು ಸ್ಥಳದಲ್ಲಿ ಇದ್ದರು ಎಂದು ಹೇಳಲಾಗಿದೆ.



