Wednesday, July 8, 2026
Google search engine
Homeಬೆಂಗಳೂರುಫುಟ್ ಪಾತ್ ಆಯಿತು ಈಗ ಅನಾಥ ವಾಹನಗಳ ಮೇಲೆ ಜಿಬಿಎ ಕಣ್ಣು!

ಫುಟ್ ಪಾತ್ ಆಯಿತು ಈಗ ಅನಾಥ ವಾಹನಗಳ ಮೇಲೆ ಜಿಬಿಎ ಕಣ್ಣು!

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ 5 ನಗರ ಪಾಲಿಕೆಗಳಲ್ಲಿ  ಜಿಬಿಎ(GBA) ಕಾಯ್ದೆ 2024, ಸೆಕ್ಷನ್ 324ರ ಅನ್ವಯ ಜುಲೈ 10 ರಿಂದ ಅನಾಥ ವಾಹನಗಳ ತೆರವು ಕಾರ್ಯವನ್ನು ಆರಂಭಿಸಲಾಗುತ್ತಿದೆ.

ಸಮಸ್ತ ಸಾರ್ವಜನಿಕರ ಗಮನಕ್ಕೆ ತರುವುದೇನೆಂದರೆ, 10ನೇ ಜುಲೈ 2026 ರಿಂದ ಅನ್ವಯವಾಗುವಂತೆ, ರಸ್ತೆಗಳು, ತೆರೆದ ಪ್ರದೇಶಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹಲವಾರು ದಿನಗಳಿಂದ ಅನಾಥವಾಗಿ ಬಿಡಲಾದ ವಾಹನಗಳನ್ನು ಗುರುತಿಸಿ 5 ನಗರ ಪಾಲಿಕೆಗಳು ಹಾಗೂ ಸಂಚಾರ ಪೊಲೀಸ್ ಅಧಿಕಾರಿಗಳು ಅವುಗಳ ವಿರುದ್ಧ ಜಂಟಿ ಕಾರ್ಯಾಚರಣೆಯ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.

  1. ನೋಟಿಸ್ ಅವಧಿ: ಗುರುತಿಸಲಾದ ಅನಾಥ ವಾಹನಗಳಿಗೆ 7 ದಿನಗಳ ಕಾಲಾವಕಾಶ ನೀಡಿ ಅಧಿಕೃತ ಸ್ಟಿಕ್ಕರ್ ಮಾದರಿಯ ನೋಟಿಸ್ ಅಂಟಿಸಲಾಗುವುದು. ನೋಟಿಸ್ ಅಂಟಿಸಿದ ವಾಹನಗಳ ಚಕ್ರಕ್ಕೆ ವೀಲ್ ಕ್ಲಾಂಪ್ ಅಳವಡಿಸಲಾಗುವುದು.
  2. ವಾಹನ ಜಪ್ತಿ(Towing): ನೋಟಿಸ್ ನೀಡಿದ 7 ದಿನಗಳ ಒಳಗಾಗಿ ವಾಹನಗಳ ಮಾಲೀಕರು ವಾಹನಗಳನ್ನು ತೆರವುಗೊಳಿಸದಿದ್ದರೆ, ಅಂತಹ ವಾಹನಗಳನ್ನು ಎಳೆದುಕೊಂಡು ಹೋಗಿ(Tow) ಜಪ್ತಿ ಮಾಡಲಾಗುವುದು.
  3. ಬಹಿರಂಗ ಹರಾಜು: ಜಪ್ತಿ ಮಾಡಲಾದ ಎಲ್ಲಾ ವಾಹನಗಳನ್ನು ನಿಯಮಾನುಸಾರ ಬಹಿರಂಗ ಹರಾಜು ಮಾಡಲಾಗುವುದು.

ರಸ್ತೆಗಳು ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ನಿಮ್ಮ ಯಾವುದೇ ವಾಹನಗಳನ್ನು ಬಿಟ್ಟಿದ್ದರೆ, ಈ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು ತಕ್ಷಣವೇ, ಸದರಿ ವಾಹನಗಳನ್ನು ನಿಮ್ಮ ಸ್ವಂತ ಜಾಗಕ್ಕೆ ಸ್ಥಳಾಂತರಿಸಲು ಸೂಚಿಸಲಾಗಿದೆ. ತಪ್ಪಿದ್ದಲ್ಲಿ ವಾಹನಗಳನ್ನು ಜಪ್ತಿ ಮಾಡಿ ಹರಾಜು ಹಾಕಲಾಗುವುದು ಎಂದು ಜಿಬಿಎ ಪ್ರಕಟಣೆಯಲ್ಲಿ ಎಚ್ಚರಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments