Monday, July 13, 2026
Google search engine
Homeಕಾನೂನುಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ತರಾಟೆ: ಗಡಿಪಾರು ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ತರಾಟೆ: ಗಡಿಪಾರು ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

ನವದೆಹಲಿ: ಗಡಿಪಾರು ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಗೌರವಾನ್ವಿತ ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಕಾನೂನು ಪ್ರಕಾರ ಸೂಕ್ತ ಸಕ್ಷಮ ಪ್ರಾಧಿಕಾರವನ್ನೇ ಸಂಪರ್ಕಿಸುವಂತೆ ನಿರ್ದೇಶಿಸಿದೆ.

ವಿಚಾರಣೆ ವೇಳೆ ಪೀಠವು, ಮಹೇಶ್ ಶೆಟ್ಟಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಉಚ್ಚ ನ್ಯಾಯಾಲಯ (ಹೈಕೋರ್ಟ್) ಈಗಾಗಲೇ ವಜಾಗೊಳಿಸಿರುವುದನ್ನು ಪ್ರಸ್ತಾಪಿಸಿತು. ಲಭ್ಯವಿರುವ ಶಾಸನಬದ್ಧ ಪರಿಹಾರಗಳನ್ನು ಬಳಸಿಕೊಳ್ಳುವ ಬದಲು ನೇರವಾಗಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವುದರ ಕುರಿತು ನ್ಯಾಯಪೀಠವು ಪ್ರಶ್ನಿಸಿತು.

ಮಹೇಶ್ ಶೆಟ್ಟಿ ಅವರ ಪರ ವಾದ ಮಂಡಿಸಿದ ವಕೀಲರು, ಈ ಗಡಿಪಾರು ಪ್ರಕರಣವನ್ನು ‘ಸೌಜನ್ಯ ಪ್ರಕರಣ’ಕ್ಕೆ ಸಂಯೋಜಿಸಲು ಯತ್ನಿಸಿದರು ಹಾಗೂ ಸ್ಥಳೀಯ ದೇವಸ್ಥಾನಕ್ಕೆ ಸಂಬಂಧಿಸಿದ ವ್ಯಕ್ತಿಗಳು ತಮ್ಮನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ವಾದಿಸಿದರು. ಆದರೆ ಸುಪ್ರೀಂ ಕೋರ್ಟ್ ಈ ವಾದವನ್ನು ತೀವ್ರವಾಗಿ ತಿರಸ್ಕರಿಸಿದ್ದು, ಅಸಂಬಂಧಿತ ವಿಷಯಗಳನ್ನು ಬಳಸಿ ಸಾರ್ವಜನಿಕ ಭಾವನೆಗಳನ್ನು ಕೆರಳಿಸುವುದು ಅಥವಾ ದುರ್ಬಳಕೆ ಮಾಡಿಕೊಳ್ಳುವುದು ಸರಿಯಲ್ಲ ಎಂದು ತರಾಟೆ ತೆಗೆದುಕೊಂಡಿತು.

ಒಂದು ವೇಳೆ ಮಹೇಶ್ ಶೆಟ್ಟಿ ಅವರಿಗೆ ಗಡಿಪಾರು ಆದೇಶದ ಕುರಿತು ಆಕ್ಷೇಪಣೆಗಳಿದ್ದರೆ, ಸಂಬಂಧಪಟ್ಟ ಮೇಲ್ಮನವಿ ಪ್ರಾಧಿಕಾರದ (Appellate Authority) ಮುಂದೆ ಮೇಲ್ಮನವಿ ಸಲ್ಲಿಸುವ ಮೂಲಕ ಸೂಕ್ತ ಕಾನೂನು ಪರಿಹಾರ ಪಡೆದುಕೊಳ್ಳಲು ಸ್ವತಂತ್ರರಾಗಿದ್ದಾರೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು.

ಅರ್ಜಿದಾರರಿಗೆ ಯಾವುದೇ ರೀತಿಯ ಪರಿಹಾರ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್, ಅರ್ಜಿಯನ್ನು ಸಂಪೂರ್ಣವಾಗಿ ವಜಾಗೊಳಿಸಿತು. ಇದೇ ವೇಳೆ ಊಹಾತ್ಮಕ ವಾದಗಳನ್ನು ಮಂಡಿಸುವುದರ ವಿರುದ್ಧ ವಕೀಲರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ ನ್ಯಾಯಪೀಠವು, “ಈ ನ್ಯಾಯಾಲಯದಲ್ಲಿ ಜೂಜಾಟವಾಡಬೇಡಿ (Do not gamble in this Court). ಒಮ್ಮೆ ಬಾಜಿ ಕಟ್ಟಿದರೆ ಮುಗಿಯಿತು, ಈ ನ್ಯಾಯಾಲಯದಲ್ಲಿ ಅಂತಹ ಅವಕಾಶಗಳಿಗೆ ಆಸ್ಪದವಿಲ್ಲ” ಎಂದು ಮೌಖಿಕವಾಗಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ( “Do not gamble in this Court. Once a bet is placed, it is done. Do not gamble in this Court.”)

ಗೌರವಾನ್ವಿತ ನ್ಯಾಯಮೂರ್ತಿ ಶ್ರೀ ಸಂಜಯ್ ಕುಮಾರ್ ಹಾಗೂ ನ್ಯಾಯಮೂರ್ತಿ ಶ್ರೀ ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ವಿಭಾಗೀಯ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments