18ನೇ ಲೋಕಸಭಾ ಅಧಿವೇಶನ ಸೋಮವಾರದಿಂದ ಆರಂಭಗೊಳ್ಳಲಿದ್ದು, ಪ್ರಧಾನಿ ಮೋದಿ ಸೇರಿದಂತೆ ನೂತನವಾಗಿ ಆಯ್ಕೆಯಾದ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮರ್ಮು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಂತರ ನೂತನ ಸಂಸದರು ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕಾರ ಪ್ರಕ್ರಿಯೆ ಆರಂಭಗೊಳ್ಳಲಿದೆ.
ಸೋಮವಾರ ಬೆಳಿಗ್ಗೆ 11 ಗಂಟೆಯಿಂದ ಲೋಕಸಭಾ ಅಧಿವೇಶನ ಆರಂಭಗೊಳ್ಳಲಿದ್ದು, ರಾಷ್ಟ್ರಪತಿಗಳ ಭಾಷಣದ ನಂತರ ಸ್ಪೀಕರ್ ಆಯ್ಕೆ ನಡೆಯಲಿದೆ. ನಂತರ ಸಂಸದರ ಪ್ರಮಾಣ ವಚನ ಪ್ರಕ್ರಿಯೆ ಆರಂಭಗೊಳ್ಳಲಿದ್ದು ಎರಡು ದಿನ ನಡೆಯುವ ಸಾಧ್ಯತೆ ಇದೆ.