ಮುಖ್ಯಮಂತ್ರಿ ಆದ ಕೂಡಲೇ ನಟ ಜೋಸೆಫ್ ವಿಜಯ್ ಅವರ ದಾಂಪತ್ಯದಲ್ಲಿ ಎದ್ದಿದ್ದ ಬಿರುಗಾಳಿ ಶಾಂತಿಯಾಗಿದ್ದು, ದಾಂಪತ್ಯ ಬಿರುಕು ಸುಖಾಂತ್ಯಗೊಂಡಿದೆ.
ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಪತ್ನಿ ಸಂಗೀತಾ ಸ್ವರ್ಣಲಿಂಗಂ ಶುಕ್ರವಾರ ನಡೆದ ವಿಚ್ಛೇದನ ಅರ್ಜಿಯ ವಿಚಾರಣೆ ವೇಳೆ ವೀಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡಿದ್ದು, ಡಿವೋರ್ಸ್ ಗೆ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.
ನಟಿ ತ್ರಿಶಾ ಜೊತೆಗೆ ಅಕ್ರಮ ಸಂಬಂಧ ಇದೆ ಎಂಬ ಆರೋಪಗಳು ಹಾಗೂ ವರದಿಗಳ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಈ ವಿಷಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.



