Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ರಾಜಕೀಯ

ತುರ್ತು ಪರಿಸ್ಥಿತಿ ಹೇರದಿದ್ದರೆ ದೇಶ ಚೂರಾಗುತ್ತಿತ್ತು: ಬಿಕೆ ಹರಿಪ್ರಸಾದ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 387 ವೀಕ್ಷಣೆಗಳು
bk hariprasad

ಬೆಂಗಳೂರು:ತುರ್ತು ಪರಿಸ್ಥಿತಿ ಜಾರಿಗೊಳಿಸದೇ ಇದ್ದಿದ್ದರೆ, ಆಗಲೇ ಹೋರಾಟದ ನೆಪದಲ್ಲಿ ಭಾರತವನ್ನು ಛಿದ್ರಗೊಳಿಸುವ ಹುನ್ನಾರ ನಡೆದಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆರೋಪಿಸಿದರು.

ಕ್ವಿಟ್ ಇಂಡಿಯಾ ಚಳವಳಿಯ ಸಂಸರಣೆಯ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ  ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ನಾಯಕರು ತುರ್ತು ಪರಿಸ್ಥಿತಿ ವಿರುದ್ಧ ಹೋರಾಟ ಮಾಡಿ ಪ್ರಜಾಪ್ರಭುತ್ವವನ್ನು ರಕ್ಷಿಸಿದ್ದಾಗಿ ಹೇಳಿಕೊಳ್ಳುತ್ತಾರೆ. ಆದರೆ ತುರ್ತು ಪರಿಸ್ಥಿತಿಯ ಸಂಪೂರ್ಣ ಇತಿಹಾಸ ಬಹುತೇಕರಿಗೆ ತಿಳಿದಿಲ್ಲ ಎಂದರು.

ಜಯಪ್ರಕಾಶ್ ನಾರಾಯಣ್ ಹಾಗೂ ಜಾರ್ಜ್ ಫರ್ನಾಂಡಿಸ್ ನೇತೃತ್ವದಲ್ಲಿ ನಡೆದ ಚಳವಳಿಯಲ್ಲಿ ರೈಲು ಸೇವೆ ಸ್ಥಗಿತಗೊಳಿಸಲಾಗಿತ್ತು.ಪ್ರತಿಭಟನೆ ಸೇರಿದಂತೆ ಹಲವು ಘಟನೆಗಳ ಹಿನ್ನೆಲೆಯಲ್ಲಿ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿತ್ತು ಎಂದರು.

ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರು ಚುನಾವಣೆಯಲ್ಲಿ ಬಳಕೆ ಮಾಡಲಾದ ಧ್ವನಿವರ್ಧಕಕ್ಕೆ ಹೆಚ್ಚಿನ ಹಣ ನೀಡಿದ್ದಾರೆ, ಅವರ ಆಪ್ತ ಕಾರ್ಯದರ್ಶಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದರು ಎಂಬ ಎರಡು ಸಣ್ಣ ಕಾರಣಗಳಿಗಾಗಿ ಲೋಕಸಭಾ ಸದಸ್ಯತ್ವದಿಂದಲೇ ಇಂದಿರಾ ಗಾಂಧಿ ಅವರನ್ನು ಅನರ್ಹಗೊಳಿಸಲಾಗಿತ್ತು.
ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲನವಿ ಸಲ್ಲಿಸಿದಾಗ ವಾದಿಸಿದ ಪಾಕಿಲಾಯ ಎಂಬ ವಕೀಲರು, ಸಂಚಾರಿ ಪೊಲೀಸ್ ದಂಡ ವಿಧಿಸುವ ರಶೀದಿಯಷ್ಟು ಸಾಂಧ್ರತೆ ಇರುವ ಆರೋಪಗಳಿಗೆ ಪ್ರಧಾನಿಯಂತಹ ಹುದ್ದೆಯನ್ನೇ ಬರ್ಖಾಸ್ತ್ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು. ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು.

ಇದೇ ಸಂದರ್ಭದಲ್ಲಿ ಜಯಪ್ರಕಾಶ್ ನಾರಾಯಣ್‌ ಅವರು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್‌ ಪ್ರತಿಭಟನಾ ಸಭೆ ನಡೆಸಿ ಪೊಲೀಸರು ಹಾಗೂ ಸೈನಿಕರು ಸರ್ಕಾರದ ಆದೇಶ ಪಾಲಿಸಬಾರದು ಎಂದು ಕರೆ ನೀಡಿದ್ದರು. ವಾಜಪೇಯಿ ಅವರು ಇಂದಿರಾ ಗಾಂಧಿ ಮನೆಯಿಂದ ಯಾರೂ ಹೊರ ಬರದಂತೆ ದಿಗ್ಧಂಧನ ವಿಧಿಸಲು ಜನರಿಗೆ ಒತ್ತಾಯಿಸಿದರು. ದೇಶದಲ್ಲಿ ಆಂತರಿಕ ದಂಗೆಯ ಪರಿಸ್ಥಿತಿ ನಿರ್ಮಾಣವಾಗಬಹುದು ಎಂಬ ಕಾರಣ ನೀಡಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ರಾಷ್ಟ್ರಪತಿ ಫಬ್ರುದ್ದೀನ್ ಅಲಿ ಅಹದ್ ಅವರ ಅನುಮೋದನೆಯೊಂದಿಗೆ ಸಂವಿಧಾನದ 352ನೇ ವಿಧಿಯಡಿ ತುರ್ತು ಪರಿಸ್ಥಿತಿ ಘೋಷಿಸಿದ್ದರು ಎಂದು ಹರಿಪ್ರಸಾದ್ ಹೇಳಿದರು.

ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸು ವುದು ಪ್ರತಿಯೊಬ್ಬರ ಜವಾ ಬ್ದಾರಿಯಾಗಿದೆ. ಧರ್ಮಾಧರಿತ ಆಡಳಿತಕ್ಕಿಂತ ಪ್ರಜಾಪ್ರಭುತ್ವವೇ ಶ್ರೇಷ್ಠ ವ್ಯವಸ್ಥೆಯಾಗಿದ್ದು, ಅದನ್ನು ಉಳಿಸಿಕೊಳ್ಳಲು ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಕರೆ ನೀಡಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಆರ್ಎಸ್‌ಎಸ್ ಅಥವಾ ಬಿಜೆಪಿಯ ಯಾವುದೇ ಪ್ರಾಣಿಯೂ ಭಾಗವಹಿಸಿರಲಿಲ್ಲ. ಒಂದು ವೇಳೆ ಇದು ಸಾಬೀತುಪಡಿಸಿದರೆ ತಾವು ಬಿಜೆಪಿಯ ಗುಲಾಮರಾಗುವುದಾಗಿ ಸವಾಲು ಹಾಕಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment