Tuesday, August 11, 2026
Google search engine
Homeರಾಜ್ಯಕರ್ನಾಟಕಕ್ಕೆ ಶಾಕ್: ತಮಿಳುನಾಡಿಗೆ ನಿತ್ಯ 12,000 ಕ್ಯೂಸೆಕ್ಸ್ ಕಾವೇರಿ ನೀರು ಹರಿಸಲು ಸೂಚನೆ

ಕರ್ನಾಟಕಕ್ಕೆ ಶಾಕ್: ತಮಿಳುನಾಡಿಗೆ ನಿತ್ಯ 12,000 ಕ್ಯೂಸೆಕ್ಸ್ ಕಾವೇರಿ ನೀರು ಹರಿಸಲು ಸೂಚನೆ

ಕರ್ನಾಟಕಕ್ಕೆ 15 ದಿನಗಳ ಕಾಲ 12 ಸಾವಿರ ಕ್ಯೂಸೆಕ್ಸ್ ಕಾವೇರಿ ನದಿ ನೀರು ಹರಿಸಲು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚಸಿದೆ. ಈ ಮೂಲಕ ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆ ಉಂಟಾಗಿದೆ.

ಕಾವೇರಿ ನದಿ ನೀರು ಹಂಚಿಕೆ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ ಸಲ್ಲಿಸಿದ್ದ ಶಿಫಾರಸ್ಸನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿ ಹಿಡಿದಿದೆ.

ಕಾವೇರಿ ಜಲನಯನ ಪ್ರದೇಶದಲ್ಲಿ ಈ ಹಿಂದೆ 15 ದಿನಗಳ ಕಾಲ 3500 ಕ್ಯೂಸೆಕ್ಸ್ ನೀರು ಬಿಡಲು ಸೂಚಿಸಲಾಗಿತ್ತು. ಆದರೆ ನೀರು ಸಂಗ್ರಹ ಕಡಿಮೆ ಇದ್ದಿದ್ದರಿಂದ ಕರ್ನಾಟಕ ನೀರು ಬಿಡಲು ನಿರಾಕರಿಸಿತ್ತು.

ಆದರೆ ಆಗಸ್ಟ್ ಆರಂಭದಲ್ಲಿ ಭಾರೀ ಮಳೆಯಾಗಿದ್ದರಿಂದ ವಿವಾದ ಶಮನಗೊಂಡಿದ್ದು, ತಮಿಳುನಾಡಿಗೆ ನಿತ್ಯ 25 ಸಾವಿರಕ್ಕೂ ಅಧಿಕ ಕ್ಯೂಸೆಕ್ಸ್ ನೀರು ಹರಿಯಬಿಡಲಾಗಿತ್ತು. ಇದೀಗ 15 ದಿನಗಳ ನೀರು ಹರಿಸಿರುವ ಬಗ್ಗೆ ಮಾಹಿತಿ ಪಡೆದ ನಂತರ ಇದೀಗ 12 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸೂಚಿಸಲಾಗಿದೆ.

15 ದಿನಗಳ ಕಾಲ 12 ಸಾವಿರ ಕ್ಯೂಸೆಕ್ಸ್ ಅಂದರೆ ಸುಮಾರು 15 ಟಿಎಂಸಿಯಷ್ಟು ನೀರು ಬಿಡಬೇಕಾಗುತ್ತದೆ ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments