Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

RSSಗೆ ಮೂಗುದಾರ? ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ–2026 ಸಂಪುಟ ಸಮ್ಮತಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 34 ವೀಕ್ಷಣೆಗಳು
rss

ಬೆಂಗಳೂರು: ರಾಜ್ಯದಲ್ಲಿ  ಕಾಂಗ್ರೆಸ್ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್​​​​ಎಸ್​​​ಎಸ್​​​) ಸಂಘರ್ಷಕ್ಕೆ ಮತ್ತೊಂದು ವೇದಿಕೆ ಸಿದ್ಧವಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕ ರಾಜ್ಯ ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ–2026’ ಕಾಯ್ದೆಯನ್ನು ಜಾರಿಗೆ ತರಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಮುಂದಾಗಿದೆ.

ಈ ಕಾಯ್ದೆ ಕುರಿತು ಗುರುವಾರ ನಡೆದ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿದ್ದು, ವಿಧೇಯಕಕ್ಕೆ ಅನುಮೋದನೆ ಸಹ ದೊರೆತಿದೆ.ಈ ವಿಧೇಯಕದ ಮೂಲಕ ಸಾರ್ವಜನಿಕ ಪ್ರದೇಶಗಳಲ್ಲಿ ಯಾವುದೇ ಸಂಘಟನೆ ಅಥವಾ ಸಂಸ್ಥೆ ಕಾರ್ಯಕ್ರಮ ಆಯೋಜಿಸುವ ಸಂದರ್ಭದಲ್ಲಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಇದರೊಂದಿಗೆ ಸಾರ್ವಜನಿಕವಾಗಿ ಆರ್ ಎಸ್ ಎಸ್ ನಡೆಸುವ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ ಎಂದು ವಿಶ್ಲೇಷಿಸಲಾಗಿದೆ.

ವಿಧೇಯಕದ ವಿವರ:

ವಿಶೇಷವಾಗಿ ಆರ್‌ಎಸ್‌ಎಸ್‌ನ ಪಥಸಂಚಲನ, ಸಾರ್ವಜನಿಕ ಕಾರ್ಯಕ್ರಮಗಳು, ಸಭೆಗಳು ಹಾಗೂ ಇತರೆ ಚಟುವಟಿಕೆಗಳಿಗೆ ನಿಯಂತ್ರಣ ಹೇರುವ ನಿಟ್ಟಿನಲ್ಲಿ ಈ ವಿಧೇಯಕ ಮಹತ್ವ ಪಡೆದುಕೊಂಡಿದೆ.
ಸಾರ್ವಜನಿಕ ಸ್ಥಳಗಳ ಬಳಕೆ, ಕಾರ್ಯಕ್ರಮಗಳ ಆಯೋಜನೆ ಮತ್ತು ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಸರ್ಕಾರಕ್ಕೆ ಹೆಚ್ಚಿನ ನಿಯಂತ್ರಣಾಧಿಕಾರ ನೀಡುವ ಅಂಶಗಳು ವಿಧೇಯಕದಲ್ಲಿರಬಹುದು ಎಂದು ಹೇಳಲಾಗಿದೆ.

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ಆಯೋಜನೆಗೆ ಅನುಮತಿ ನಿರಾಕರಿಸಿದ ವಿಚಾರ ಈ ಹಿಂದೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಅನುಮತಿ ನಿರಾಕರಣೆಯನ್ನು ಪ್ರಶ್ನಿಸಿ ಆರ್‌ಎಸ್‌ಎಸ್‌ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿತ್ತು. ನಂತರ ನ್ಯಾಯಾಲಯವು ಕೆಲವು ಷರತ್ತುಗಳೊಂದಿಗೆ ಪಥಸಂಚಲನಕ್ಕೆ ಅವಕಾಶ ನೀಡಿತ್ತು.

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಸಂಘಟನೆಗಳ ಕಾರ್ಯಕ್ರಮಗಳಿಗೆ ಅನುಮತಿ ನೀಡುವ ವ್ಯವಸ್ಥೆ ಕುರಿತು ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ರಾಜಕೀಯ ಚರ್ಚೆ ತೀವ್ರಗೊಂಡಿತ್ತು.

ಸಾರ್ವಜನಿಕ ಆಸ್ತಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಕಾರ್ಯಕ್ರಮ ನಡೆಸುವುದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ 2025ರಲ್ಲೇ ಆದೇಶ ಹೊರಡಿಸಿತ್ತು. ಈ ಆದೇಶದಡಿ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಅಥವಾ ಮೆರವಣಿಗೆ ನಡೆಸಲು ಸಂಬಂಧಪಟ್ಟ ಅಧಿಕಾರಿಗಳ ಪೂರ್ವಾನುಮತಿ ಪಡೆಯುವ ವ್ಯವಸ್ಥೆ ಜಾರಿಗೊಂಡಿತ್ತು.

ಚಟುವಟಿಕೆಗಳಿಗೆ ಬ್ರೇಕ್:

ಕಾನೂನು ರೂಪ ನೀಡುವ ನಿಟ್ಟಿನಲ್ಲಿ ‘ಕರ್ನಾಟಕ ರಾಜ್ಯ ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ–2026’ ತರಲು ಸರ್ಕಾರ ಮುಂದಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಕಾರ್ಯಕ್ರಮಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳುವುದು, ಸಂಚಾರಕ್ಕೆ ಅಡ್ಡಿಯಾಗದಂತೆ ನಿಯಂತ್ರಿಸುವುದು ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವುದು ವಿಧೇಯಕದ ಪ್ರಮುಖ ಉದ್ದೇಶಗಳಾಗಿರಬಹುದು.

ಆದರೆ, ಆರ್‌ಎಸ್‌ಎಸ್‌ ಚಟುವಟಿಕೆಗಳ ಹಿನ್ನೆಲೆಯಲ್ಲಿ ವಿಧೇಯಕದ ಬಗ್ಗೆ ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಾಗಿದೆ. ವಿಧೇಯಕವು ಕೇವಲ ಆರ್‌ಎಸ್‌ಎಸ್‌ಗೆ ಮಾತ್ರ ಅನ್ವಯವಾಗುತ್ತದೆಯೇ ಅಥವಾ ಎಲ್ಲಾ ಸಂಘಟನೆಗಳು, ಸಂಸ್ಥೆಗಳು ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸಮಾನವಾಗಿ ಅನ್ವಯವಾಗುತ್ತದೆಯೇ ಎಂಬುದು ವಿಧೇಯಕದ ಅಂತಿಮ ರೂಪದ ಬಳಿಕ ಸ್ಪಷ್ಟವಾಗಲಿದೆ.

ಸಂಪುಟದಲ್ಲಿ ಒಪ್ಪಿಗೆ:

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕದ ಪ್ರಮುಖ ಅಂಶಗಳ ಕುರಿತು ಚರ್ಚೆ ಆಗಿದ್ದು, ಇದೇ ಮಳೆಗಾಲದ ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹೀಗಾಗಿ ವಿಧೇಯಕದ ಅಂತಿಮ ಸ್ವರೂಪ, ಸಾರ್ವಜನಿಕ ಪ್ರದೇಶಗಳ ವ್ಯಾಪ್ತಿ ಹಾಗೂ ಕಾರ್ಯಕ್ರಮಗಳಿಗೆ ಅನುಮತಿ ನೀಡುವ ನಿಯಮಗಳ ಬಗ್ಗೆ ಸಭೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬೀಳುವ ನಿರೀಕ್ಷೆಯಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment