Wednesday, September 23, 2026
Google search engine
Homeಕಾನೂನುವಿಚಾರಣೆಗೆ ದರ್ಶನ್ ಖುದ್ದು ಹಾಜರಿ: ಅರ್ಜಿ ವಜಾ

ವಿಚಾರಣೆಗೆ ದರ್ಶನ್ ಖುದ್ದು ಹಾಜರಿ: ಅರ್ಜಿ ವಜಾ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ತಮಗೆ ವಿಡಿಯೋ ಕಾನ್ಫರೆನ್ಸ್ ಬದಲು ನ್ಯಾಯಾಲಯದಲ್ಲಿ ಖುದ್ದಾಗಿ ಹಾಜರಾಗಲು ಅವಕಾಶ ನೀಡಬೇಕು ಎಂದು ನಟ ದರ್ಶನ್ ಮನವಿ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ನಗರದ 59ನೇ ಸಿಸಿಹೆಚ್ ಕೋರ್ಟ್ ವಜಾ ಮಾಡಿದೆ.

ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು 59ನೇ ಸಿಸಿಹೆಚ್ ಕೋರ್ಟ್ ವಜಾ ಮಾಡಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳ ಹಾಜರಿಗೆ ಸೂಚನೆ ನೀಡಲಾಗಿದೆ.

ದರ್ಶನ್ ಪರ ಹಿರಿಯ ವಕೀಲ ಹಷ್ಮತ್ ಪಾಷಾ ವಾದ ಮಂಡಿಸಿದ್ದರು. ಖುದ್ದು ಹಾಜರುಪಡಿಸಿದರೆ ಸಾಕ್ಷ್ಯ ವಿಚಾರಣೆ ವೇಳೆ ಸೂಚನೆ ಪಡೆಯಲು ಅನುಕೂಲ ಆಗುತ್ತದೆ. ವಿಡಿಯೋ ಕಾನ್ಫರೆನ್ಸ್​ನಲ್ಲಿ ಮಾತನಾಡಲು ಹೆಡ್ ಫೋನ್ ವ್ಯವಸ್ಥೆ ಇಲ್ಲ. ಹೀಗಾಗಿ ಖುದ್ದು ಹಾಜರಿಗೆ ಆದೇಶ ನೀಡಬೇಕು ಎಂದು ಮನವಿ ಮಾಡಿದ್ದರು. ಆದರೆ ಇದಕ್ಕೆ ಎಸ್​ಪಿಪಿ ಪ್ರಸನ್ನ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದರು.

‘ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಕಾನೂನಿನಲ್ಲೇ ಅವಕಾಶವಿದೆ. ದರ್ಶನ್ ಅವರನ್ನು ಖುದ್ದು ಹಾಜರುಪಡಿಸಿದರೆ ಕೋರ್ಟ್ ಕಲಾಪಕ್ಕೆ ಅಡ್ಡಿಯಾಗಬಹುದು. ಆದ್ದರಿಂದ ಖುದ್ದು ಹಾಜರಿ ಅಗತ್ಯವಿಲ್ಲ’ ಎಂದು ಪ್ರಸನ್ನ ಕುಮಾರ್ ವಾದ ಮಾಡಿದ್ದರು. ಜಡ್ಜ್ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಆದೇಶ ಕಾಯ್ದಿರಿಸಿದ್ದು, ಸೋಮವಾರ ಆದೇಶ ಪ್ರಕಟವಾಗಿದ್ದು, ದರ್ಶನ್ ಅವರಿಗೆ ಹಿನ್ನಡೆ ಆಗಿದೆ.

ಆರೋಪಿಗಳು ತಮ್ಮ ವಕೀಲರೊಂದಿಗೆ ಮಾತನಾಡಲು ಖಾಸಗಿತನದ ವ್ಯವಸ್ಥೆ ಕಲ್ಪಿಸಲು ಕೋರ್ಟ್ ಸೂಚನೆ ನೀಡಿದೆ. ನಿಯಮ 8.3 ಅಡಿಯಲ್ಲಿ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ. ಸಾಕ್ಷ್ಯ ವಿಚಾರಣೆ ವೇಳೆ ಅಗತ್ಯವಿರುವಾಗ ಸಂಪರ್ಕದ ಅವಕಾಶ ನೀಡಬೇಕು. ಸಾಕ್ಷ್ಯ ವಿಚಾರಣೆಗೆ ಮೊದಲು, ನಡುವೆ, ನಂತರ ಸಂಪರ್ಕಿಸಬಹುದು. ಸಾಕ್ಷಿಗಳ ಹೇಳಿಕೆಯನ್ನು ಸ್ಪಷ್ಟವಾಗಿ ಕೇಳುವಂತೆ ವ್ಯವಸ್ಥೆ ಕಲ್ಪಿಸಿ ಎಂದು ಸಿವಿಲ್ ಕೋರ್ಟ್​ನ ತಾಂತ್ರಿಕ ವಿಭಾಗಕ್ಕೆ ಕೋರ್ಟ್ ಸೂಚನೆ ನೀಡಿದೆ.

ರ್ಶನ್ ಗೆ ಸೊಳ್ಳೆ ಕಾಟ

ಬೆಂಗಳೂರು:ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ  ಜೈಲಿನಲ್ಲಿರುವ ನಟ ದರ್ಶನ್‌ ಸೊಳ್ಳೆಗಳ ಕಾಟ ತಾಳಲಾಗದೇ ಪರಿತಪಿಸುತ್ತಿದ್ದಾರೆ.

ಜೈಲಿನಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಅದರಿಂದ ಮುಕ್ತಿ ನೀಡುವಂತೆ ದರ್ಶನ್ ಜೈಲು ಅಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದಾರೆ.

ಕಾರಾಗೃಹ ಇಲಾಖೆಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಲೋಕ್ ಕುಮಾರ್ ಅವರು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದ ವೇಳೆ ನಟ ದರ್ಶನ್, ‘ಜೈಲಿನಲ್ಲಿ ಸೊಳ್ಳೆಗಳ ಕಾಟ ವಿಪರೀತವಾಗಿದೆ. ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ಲ, ಇದಕ್ಕೆ ಏನಾದರೂ ಪರಿಹಾರ ಮಾಡಿ’ ಎಂದು ಅವರಿಗೆ ಮನವಿ ಮಾಡಿದ್ದಾರೆ.

ದರ್ಶನ್ ಮನವಿಯನ್ನು ಅಲಿಸಿದ ಅವರು . ‘ಸೊಳ್ಳೆಗಳ ವಿಷಯದಲ್ಲಿ ನಾನೇನು ಮಾಡಲು ಸಾಧ್ಯವಿಲ್ಲ. ಜೈಲಿನ ಮ್ಯಾನ್ಯುವಲ್ ಪ್ರಕಾರ ಬಂದಿಗಳಿಗೆ ಏನೆಲ್ಲಾ ಸೌಲಭ್ಯ ಒದಗಿಸಬೇಕೋ ಅದನ್ನು ಮಾತ್ರ ಕೊಡಲು ಸಾಧ್ಯ. ಮ್ಯಾನ್ಯುವಲ್‌ನಲ್ಲಿ ಇಲ್ಲದಿರುವುದನ್ನು ನೀಡಲು ಬರುವುದಿಲ್ಲ. ಜೈಲು ನಿಯಮಾವಳಿ ಪ್ರಕಾರ ಏನಾದರೂ ಸಮಸ್ಯೆಗಳಿದ್ದರೆ ಹೇಳಿ, ಸೌಲಭ್ಯ ಒದಗಿಸುತ್ತೇವೆ. ಅದನ್ನು ಹೊರತುಪಡಿಸಿ ಸೊಳ್ಳೆಗಳ ಬಗ್ಗೆ ನಾವೇನು ಮಾಡಲು ಆಗುವುದಿಲ್ಲ’ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments