Sunday, 8 November 2026 — Kannadavahini
BREAKING NEWS
ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ
ಕಾನೂನು

ಸೌಜನ್ಯ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 298 ವೀಕ್ಷಣೆಗಳು
soujanya case

ಮಂಗಳೂರು: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.

ನ್ಯಾಯಮೂರ್ತಿ ಸಂಜಯ್ ಕುಮಾರ್ ಮತ್ತು ನ್ಯಾಯಮೂರ್ತಿ ಸಂಜೀವ್ ಸಚಿದೇವ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಸೌಜನ್ಯ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನಂತರ ಸೋಮವಾರ ಈ ಆದೇಶ ಹೊರಡಿಸಿದೆ.

ಹೊಸ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ಹೊಸ ಎಸ್‌ಐಟಿಯಲ್ಲಿ ಇರಬಾರದು. ಹೊಸ ತಂಡ ರಚಿಸಿ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.

ಇದೇ ವೇಳೆ ಸ್ವತಂತ್ರ ತನಿಖೆ ನಡೆಸದೇ ಹಳೆಯದ ತನಿಖಾ ವರದಿಗಳನ್ನೇ ವರದಿಯನ್ನಾಗಿ ನೀಡಿ ಆರೋಪಿಯನ್ನು ಖುಲಾಸೆಗೊಳಿಸಿದೆ. ಸಿಬಿಐ ಮುಖ್ಯಸ್ಥರು ತಾವೇ ನ್ಯಾಯಾಧೀಶರು ಎಂದು ಭಾವಿಸಿದ್ದಾರೆ ಎಂದು ಚಾಟಿ ಬೀಸಿದೆ.

2012ರಲ್ಲಿ ನಡೆದ ಪ್ರಕರಣದ ತನಿಖೆಯನ್ನು ಆರಂಭದಲ್ಲಿ ಸ್ಥಳೀಯ ಪೊಲೀಸರು ನಡೆಸಿದ್ದರು. ಬಳಿಕ ತನಿಖೆ ಸಿಐಡಿ ಹಾಗೂ ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವಹಿಸಲಾಗಿತ್ತು. ಸಿಬಿಐ ತನಿಖೆಯ ಬಳಿಕ ಸಂತೋಷ್ ರಾವ್ ಅವರನ್ನು ಆರೋಪಿಯನ್ನಾಗಿ ಮಾಡಲಾಗಿತ್ತು. ಆದರೆ, 2023ರ ಜೂನ್ 16ರಂದು ಸಿಬಿಐ ವಿಶೇಷ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಅವರನ್ನು ಖುಲಾಸೆಗೊಳಿಸಿತ್ತು.

ಸಂತೋಷ್ ರಾವ್ ಖುಲಾಸೆಯಾದ ಬಳಿಕ ಪ್ರಕರಣದ ನೈಜ ಆರೋಪಿಗಳನ್ನು ಪತ್ತೆಹಚ್ಚಲು ಮರುತನಿಖೆ ನಡೆಸಬೇಕೆಂಬ ಬೇಡಿಕೆ ಕೇಳಿಬಂದಿತ್ತು. ಸೌಜನ್ಯಾ ಅವರ ತಾಯಿ ಕುಸುಮಾವತಿ ಗೌಡ ಅವರು ಮರುತನಿಖೆಗೆ ಆಗ್ರಹಿಸಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ ಬಳಿಕ ಅವರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ವೇಳೆ ಸಿಬಿಐ ತನಿಖೆಯ ವಿಧಾನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ತನಿಖಾಧಿಕಾರಿಗಳು ಹಿಂದೆ ಸಂಗ್ರಹಿಸಲಾಗಿದ್ದ ಸಾಕ್ಷ್ಯಗಳನ್ನೇ ಆಧರಿಸಿ ವರದಿ ಸಿದ್ಧಪಡಿಸಿದ್ದು, ಸ್ವತಂತ್ರ ತನಿಖೆ ನಡೆಸಿಲ್ಲ ಎಂಬ ವಿಚಾರವನ್ನು ನ್ಯಾಯಪೀಠ ಪ್ರಸ್ತಾಪಿಸಿತ್ತು. ಅಪರಾಧ ನಡೆದ ಸ್ಥಳಕ್ಕೆ ಭೇಟಿ ನೀಡದಿರುವುದು ಹಾಗೂ ಸೌಜನ್ಯಾ ಅವರ ತಾಯಿಯ ಹೇಳಿಕೆ ದಾಖಲಿಸದಿರುವ ಬಗ್ಗೆಯೂ ನ್ಯಾಯಾಲಯ ಪ್ರಶ್ನಿಸಿತ್ತು.

ಇದೀಗ ಹೊಸ ಎಸ್‌ಐಟಿ ಮೂಲಕ ಮರುತನಿಖೆಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು, ಮೂರು ತಿಂಗಳ ಕಾಲಮಿತಿಯನ್ನೂ ನಿಗದಿಪಡಿಸಿದೆ. 2012ರ ಪ್ರಕರಣವು 14 ವರ್ಷಗಳ ಬಳಿಕ ಮತ್ತೊಮ್ಮೆ ತನಿಖೆಯ ಹಂತಕ್ಕೆ ಬಂದಿರುವುದು ಪ್ರಕರಣದ ಮುಂದಿನ ಬೆಳವಣಿಗೆಗಳತ್ತ ಗಮನ ಸೆಳೆದಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8407 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment