Sunday, 8 November 2026 — Kannadavahini
BREAKING NEWS
ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಕಾನೂನು ಬಿಜೆಪಿ ವಿರುದ್ಧ ಅಪಪ್ರಚಾರ: ಡಿಕೆಶಿ, ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ರಿಲೀಫ್ ರಾಜ್ಯ ಕೆಪಿಎಸ್ ಸಿ ಹಗರಣ: ಎಸ್ ಐಟಿ ಮುಖ್ಯಸ್ಥರಾಗಿ ಹಿತೇಂದ್ರ ನೇಮಕ
ರಾಜ್ಯ

ಕಸ್ತೂರಿ ರಂಗನ್‌ ವರದಿ ಯಥಾವತ್ ಒಪ್ಪದೇ ಇರಲು ಸರ್ವಾನುಮತದ ನಿರ್ಣಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 28 ವೀಕ್ಷಣೆಗಳು
dk shivakumar

ಬೆಂಗಳೂರು: ಪಶ್ಚಿಮ ಘಟ್ಟ ಉಳಿವಿಗೆ ಕಸ್ತೂರಿರಂಗನ್ ವರದಿಯನ್ನು ಯಥಾವತ್ತಾಗಿ ಒಪ್ಪದೇ ಇರುವುದು ಸೇರಿದಂತೆ 7 ನಿರ್ಣಯಗಳನ್ನು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ವಿಶೇಷ ಅಧಿವೇಶನದ ಎರಡನೇ ದಿನವಾದ ಮಂಗಳವಾರ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಮುಖ್ಯಸ್ಥರನ್ನೊಳಗೊಂಡ ಸಮಿತಿ ರಚಿಸಲಿದ್ದು, ಈ ಸಮಿತಿಯು ಕಸ್ತೂರಿ ರಂಗನ್ ವರದಿಯಲ್ಲಿನ ನ್ಯೂನತೆಗಳನ್ನು ಗರುತಿಸಿ ಸೂಕ್ತ ಶಿಫಾರಸು ಮಾಡಲಿದೆ. ಈ ಸಮಿತಿ ವರದಿ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಘೋಷಿಸಿದರು.

ಕಸ್ತೂರಿ ರಂಗನ್ ವರದಿಯ ನ್ಯೂನತೆಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿ ಸೂಚಿಸಲು ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಮಿತಿಯಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು, ರೈತ ಸಮುದಾಯದ ಪ್ರತಿನಿಧಿಗಳು, ಕೈಗಾರಿಕೆ ಮತ್ತು ಉದ್ಯಮ ಕ್ಷೇತ್ರದ ಪ್ರತಿನಿಧಿಗಳು, ಅರಣ್ಯ–ಪರಿಸರ ತಜ್ಞರು, ಶೈಕ್ಷಣಿಕ ಸಂಸ್ಥೆಗಳ ಪರಿಣಿತರು ಇರಲಿದ್ದಾರೆ ಎಂದು ಸಿಎಂ ಶಿವಕುಮಾರ್ ಚರ್ಚೆಗೆ ಉತ್ತರಿಸಿ ತಿಳಿಸಿದರು.

ಈ ಸಮಿತಿಯು ಭೌತಿಕ ಸಮೀಕ್ಷೆ ನಡೆಸಿ ಪರಿಸರ ಸೂಕ್ಷ್ಮ ಪ್ರದೇಶ, ಅರಣ್ಯ, ಕೃಷಿ, ತೋಟಗಾರಿಕೆ ಹಾಗೂ ಜನವಸತಿ ಪ್ರದೇಶಗಳನ್ನು ವೈಜ್ಞಾನಿಕವಾಗಿ ಪ್ರತ್ಯೇಕಿಸುವ ಕುರಿತು ಶಿಫಾರಸು ಮಾಡಲಿದೆ. ಇದರೊಂದಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಸಮಿತಿಗಳನ್ನು ರಚಿಸಲು ನಿರ್ಣಯಿಸಲಾಗಿದೆ ಎಂದು ಹೇಳಿದರು.

ಕಸ್ತೂರಿ ರಂಗನ್ ವರದಿ ಕುರಿತ ಕೇಂದ್ರ ಸರ್ಕಾರದ ಏಳನೇ ಕರಡು ಅಧಿಸೂಚನೆಯನ್ನು ಪ್ರಸ್ತುತ ಯಥಾಸ್ಥಿತಿಯಲ್ಲಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಜುಲೈ 27, 2026ರಂದು ಕೇಂದ್ರ ಸರ್ಕಾರ ಹೊರಡಿಸಿದ ಏಳನೇ ಕರಡು ಇಎಸ್ ಎ ಅಧಿಸೂಚನೆಯಲ್ಲಿ ಕರ್ನಾಟಕದ 10 ಜಿಲ್ಲೆಗಳ 1,449 ಗ್ರಾಮಗಳ ಒಟ್ಟು 20,668 ಚದರ ಕಿ.ಮೀ. ಪ್ರದೇಶವನ್ನು ಗುರುತಿಸಲಾಗಿದೆ. ಕೇಂದ್ರ ಸರ್ಕಾರದ ಈ ಕರಡು ಅಧಿಸೂಚನೆಯು ಉಪಗ್ರಹ ಆಧಾರಿತ ಅವೈಜ್ಞಾನಿಕ ಸಮೀಕ್ಷೆಯಾಗಿದ್ದು, ಜಂಟಿ ಭೌತಿಕ ಸಮೀಕ್ಷೆ ಅಥವಾ ಸರ್ವೇ ನಂಬರ್ ಆಧಾರಿತವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಉಪಗ್ರಹ ಚಿತ್ರಗಳಲ್ಲಿ ಅರಣ್ಯ ಮತ್ತು ಕೃಷಿ-ತೋಟಗಾರಿಕೆ ಪ್ರದೇಶಗಳು ಒಂದೇ ರೀತಿ ಹಸಿರಾಗಿ ಕಾಣುವುದರಿಂದ ಈ ಗೊಂದಲ ಸೃಷ್ಟಿಯಾಗಿದೆ. ಒಂದು ಗ್ರಾಮದ ಐದನೇ ಒಂದು ಭಾಗ (20%) ಅರಣ್ಯ ಪ್ರದೇಶದಲ್ಲಿದೆ ಎಂಬ ಕಾರಣಕ್ಕೆ ಇಡೀ ಗ್ರಾಮವನ್ನೇ ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸುವುದು ವೈಜ್ಞಾನಿಕ ಕ್ರಮವಲ್ಲ. ಇದರಿಂದ ಮನೆ ನಿರ್ಮಾಣ, ಆಸ್ತಿ ವಾರಸುದಾರಿಕೆ, ಕೃಷಿ, ಪ್ಲಾಂಟೇಶನ್, ರಸ್ತೆ, ಶಾಲೆ, ಆಸ್ಪತ್ರೆ ಮತ್ತು ಕುಡಿಯುವ ನೀರಿನ ಪೈಪ್ಲೈನ್ನಂತಹ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೌಲಭ್ಯಗಳಿಗೆ ಅನಗತ್ಯ ತೊಂದರೆ ಉಂಟಾಗಿ ಸ್ಥಳೀಯರಲ್ಲಿ ಆತಂಕ ಮೂಡಿದೆ ಎಂದು ವಿವರಿಸಿದರು.

ಗ್ರಾಮವಾರು, ಸರ್ವೇ ನಂಬರ್‌ ವಾರು ಸಮೀಕ್ಷೆ

ನ್ಯೂನತೆಗಳನ್ನು ನಿವಾರಿಸಲು ಭೌತಿಕವಾಗಿ ಗ್ರಾಮವಾರು ಮತ್ತು ಸರ್ವೇ ಸಂಖ್ಯೆವಾರು ಸಮೀಕ್ಷೆ ನಡೆಸಿ, ಪ್ರತಿಯೊಂದು ಗ್ರಾಮದ ಮನೆ, ಶಾಲೆ, ತೋಟಗಾರಿಕೆ, ಕುಡಿಯುವ ನೀರು ಮತ್ತು ವಿದ್ಯುತ್ ಕಂಬಗಳ ನಕ್ಷೆ ತಯಾರಿಸಿ ರಕ್ಷಣೆ ಮಾಡಬೇಕಿದೆ. ಕಾಡಿನೊಳಗೆ ಬಫರ್ ಜೋನ್ ಮಾಡಿಕೊಳ್ಳಲಿ ಹಾಗೂ ಬಡವರಿಗೆ ಮನೆ ನೀಡಲು ಸೂಕ್ತ ಮಾರ್ಗಸೂಚಿ ರೂಪಿಸಬೇಕಿದೆ. ಈ ಸಮೀಕ್ಷೆ ನಡೆಸಿ ನಕ್ಷೆ ಸಿದ್ಧಪಡಿಸಲು ಮತ್ತು ಮಾರ್ಪಾಡುಗಳನ್ನು ಸೂಚಿಸಲು ಒಂದು ವರ್ಷದ ಕಾಲಾವಕಾಶ ನೀಡುವಂತೆ ಹಾಗೂ ಕರಡು ಅಧಿಸೂಚನೆಯನ್ನು ಅಂತಿಮಗೊಳಿಸದೇ ವಿವರವಾದ ಚರ್ಚೆ ನಡೆಸುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗುವುದು” ಎಂದು ತಿಳಿಸಿದರು.

ಕಸ್ತೂರಿ ರಂಗನ್ ವರದಿ ಜಾರಿಗೆ ಕೇಂದ್ರದಿಂದ ಹೊರಡಿಸಲಾಗಿದ್ದ 7ನೇ ಕರಡು ಅಧಿಸೂಚನೆ ವಿರೋಧಿಸಿ, ರಾಜ್ಯ ಸರ್ಕಾರ ಹಲವು ನಿರ್ಣಯಗಳನ್ನು ಕೈಗೊಂಡಿದೆ. ಪಶ್ಚಿಮ ಘಟ್ಟ ಪ್ರದೇಶದ ಪರಿಸರ ಸಂರಕ್ಷಣೆ ಹಾಗೂ ಅಲ್ಲಿನ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಸರ್ಕಾರದ ನಿರ್ಣಯದ ವಿವರ:

ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕೇವಲ ಅಧಿಸೂಚಿತ ಅರಣ್ಯ ಪ್ರದೇಶಗಳು, ಇತರೆ ಅರಣ್ಯ ಪ್ರದೇಶಗಳು ಹಾಗೂ ನೀರಿನ ಮೂಲಗಳನ್ನಷ್ಟೇ ಒಳಪಡಿಸುವಂತೆ ಕ್ರಮ

ಕೃಷಿ ಭೂಮಿ, ತೋಟಗಾರಿಕೆ/ಪ್ಲಾಂಟೇಶನ್ ಪ್ರದೇಶಗಳು, ಜನವಸತಿ ಹಾಗೂ ಸಾರ್ವಜನಿಕ ಚಟುವಟಿಕೆ ಪ್ರದೇಶಗಳನ್ನು ನಿರ್ಬಂಧದಿಂದ ಹೊರಗಿಡಲು ನಿರ್ಧಾರ

ಬಿಗರ್‌ ಮುಖಂ, ಅರಣ್ಯ ಹಕ್ಕು, ಡೀಮ್ಡ್ ಫಾರೆಸ್ಟ್ ಸೇರಿದಂತೆ ಮಲೆನಾಡು ಹಾಗೂ ನ್ಯಾಚುರಲ್ ಪ್ರದೇಶಗಳಿಗೆ ಸಂಬಂಧಿಸಿದ ವಿಚಾರಗಳನ್ನು ಪರಿಶೀಲಿಸಲು ಕ್ರಮ

ತಳ್ಳಳ ಸಮಿತಿಯಿಂದ ಭೌತಿಕವಾಗಿ ಅರಣ್ಯಗಡಿ, ಜನವಸತಿ, ಪರಿಸರ ಸೂಕ್ಷ್ಮ ಪ್ರದೇಶಗಳನ್ನು ಜನವಸತಿ ಕ್ಷೇಮ ಚಟುವಟಿಕೆ ಪ್ರದೇಶಗಳೊಂದಿಗೆ ಸರ್ವೆ ನಡೆಸಲು ಸೂಚನೆ

ನ್ಯಾಯಾಧಿಕಾರಿಗಳ ಅಧೀನದಲ್ಲಿರುವ ಉನ್ನತ ಮಟ್ಟದ ಸಮಿತಿ ರಚಿಸಲು ತೀರ್ಮಾನ

ಭೌಗೋಳಿಕವಾಗಿ ಸೂಕ್ಷ್ಮ ಪ್ರದೇಶಗಳನ್ನು ರಾಜ್ಯ ಸರ್ಕಾರದ ಮಟ್ಟದಲ್ಲೇ ನಿರ್ಧರಿಸಲು ಕ್ರಮ

ರಾಜ್ಯ ಮಟ್ಟದ ಸಮಿತಿಗೆ ಸಹಾಯ ಮಾಡಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಜನಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸಲು ತೀರ್ಮಾನ

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8407 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment