Monday, 16 November 2026 — Kannadavahini
BREAKING NEWS
ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ!
ದೇಶ

ಎಸ್ಐಆರ್ ತಡೆಗೆ ವಿಪಕ್ಷಗಳ ಮೆರವಣಿಗೆ: ಪೊಲೀಸರ ತಡೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 489 ವೀಕ್ಷಣೆಗಳು
rahul gandhi

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ರಾಜೀನಾಮೆ ಹಾಗೂ ಎಸ್ ಐಆರ್ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ತಮ್ಮ ಭೇಟಿಗೆ ಅವಕಾಶ ನಿರಾಕರಿಸಿದರೂ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳು ಸುಪ್ರೀಂಕೋರ್ಟ್ ವರೆಗೂ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿತ್ತು.

ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದ್ದು, ಪೊಲೀಸರು ಸುಪ್ರೀಂಕೋರ್ಟ್ ಕಚೇರಿ ಬಳಿ ತಡೆದರು. ಆದರೆ ರಾಹುಲ್ ಗಾಂಧಿ ಬಸ್ ಮೇಲೇರಿ ಧರಣಿ ನಡೆಸಿದರು.

ಮತ ಕಳ್ಳತನ ನಡೆಯುತ್ತಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ನಮ್ಮ ಬಳಿ ಇವೆ. ಆದ್ದರಿಂದ ಎಸ್ ಐಆರ್ ಪ್ರಕ್ರಿಯೆಗೆ ಕೂಡಲೇ ತಡೆ ನೀಡಿ ಚುನಾವಣಾ ಆಯೋಗಕ್ಕೆ ಆದೇಶ ನೀಡಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಸೇರಿದಂತೆ ಹಲವು ವಿಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು.

ಭೇಟಿ ನಿರಾಕರಿಸಿದ್ದ ಸಿಜೆಐ

ಎಸ್‌ಐಆ‌ರ್ ಪ್ರಕ್ರಿಯೆ ಮತ್ತು ಚುನಾವಣಾ ಆಯೋಗದ ಕಾರ್ಯನಿರ್ವಹಣೆಗೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ಭೇಟಿಗೆ ಸಮಯ ಕೋರಿ ರಾಹುಲ್ ಗಾಂಧಿ ಸೇರಿ ವಿರೋಧ ಪಕ್ಷಗಳ ನಾಯಕರು ಪತ್ರ ಬರೆದಿದ್ದರೂ, ಅವರನ್ನು ಭೇಟಿಯಾಗಲು ಸಿಜೆಐ ಸೂರ್ಯಕಾಂತ್ ಅವರು ನಿರಾಕರಿಸಿದ್ದರು.

ಎಸ್‌ಐಆ‌ರ್ ಪ್ರಕ್ರಿಯೆಯ ಕುರಿತು ಕಳವಳ ವ್ಯಕ್ತಪಡಿಸಲು ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಲು ರಾಹುಲ್ ಗಾಂಧಿ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಜೆಐ ಭೇಟಿಗೆ ಸಮಯ ಕೋರಿದ್ದರು.

ಚರ್ಚಿಸಲು ಬಯಸುವ ವಿಷಯಗಳು ಈಗಾಗಲೇ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿಯಿರುವುದರಿಂದ ಸಿಜೆಐ ಅವರು ಈ ಭೇಟಿಯ ವಿನಂತಿಯನ್ನು ನಿರಾಕರಿಸಿದರು. ಅಲ್ಲದೆ, ನ್ಯಾಯಾಲಯವು ಸರ್ಕಾರದ ಆಡಳಿತಾತ್ಮಕ ಕಾರ್ಯನಿರ್ವಹಣೆಯಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಜೊತೆಗೆ, ಸೂಕ್ತ ಪರಿಹಾರಕ್ಕಾಗಿ ನ್ಯಾಯಾಂಗದ ಮೊರೆ ಹೋಗಲು ಎಲ್ಲರೂ ಮುಕ್ತರಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8419 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment