Tuesday, October 20, 2026
Google search engine
Homeರಾಜ್ಯಕಬ್ಬು ಬೆಳೆಗಾರರ ಧರಣಿ ತಾತ್ಕಾಲಿಕ ವಾಪಸ್

ಕಬ್ಬು ಬೆಳೆಗಾರರ ಧರಣಿ ತಾತ್ಕಾಲಿಕ ವಾಪಸ್

ಹುಬ್ಬಳ್ಳಿ: ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಸಮಿತಿ ರಚಿಸಿದ್ದು, ಒಂದು ತಿಂಗಳ ಕಾಲವಕಾಶ ನೀಡುವಂತೆ ಕೇಂದ್ರ ಸರ್ಕಾರದ ಮನವಿಗೆ ಸ್ಪಂದಿಸಿದ ಕಬ್ಬು ಬೆಳೆಗಾರರು ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಜೊತೆ ರೈತರ ಮುಖಂಡರ ಸಭೆ ನಡೆದಿದ್ದು, ಈಗಾಗಲೇ ತಜ್ಞರ ಸಮಿತಿ ರಚಿಸಿದ್ದು, ವರದಿ ಬಂದ ಕೂಡಲೇ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳ ಪರಿಹಾರಕ್ಕೆ ತಜ್ಞರ ಸಮಿತಿಯೊಂದಿಗೆ ಸಮಗ್ರ ಚರ್ಚೆ ನಡೆಸಿ ಶೀಘ್ರದಲ್ಲೇ ಸೂಕ್ತ ಹಾಗೂ ಉತ್ತಮ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ವಾಪಸ್ ಪಡೆಯುವುದಾಗಿ ತಿಳಿಸಿದ್ದಾರೆ.

ಸಭೆಯಲ್ಲಿ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ರೈತರ ವಿವಿಧ ಬೇಡಿಕೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.

ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಸಂಬಂಧಪಟ್ಟ ತಜ್ಞರ ಸಮಿತಿಯೊಂದಿಗೆ ಚರ್ಚಿಸಿ, ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಸೂಕ್ತ ಪರಿಹಾರ ರೂಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರೈತ ಮುಖಂಡರಾದ ಚುನಪ್ಪ ಪೂಜಾರಿ ಹಾಗೂ ಶಶಿಕಾಂತ ಗುರೂಜಿ ಅವರ ನೇತೃತ್ವದ ರೈತ ನಿಯೋಗವು ಸಭೆಯಲ್ಲಿ ಭಾಗವಹಿಸಿ ತಮ್ಮ ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದಿತು. ರೈತರ ಬೇಡಿಕೆಗಳಿಗೆ ಸಕಾರಾತ್ಮಕ ಸ್ಪಂದನೆ ದೊರೆತ ಹಿನ್ನೆಲೆಯಲ್ಲಿ ಸಭೆ ಮಹತ್ವ ಪಡೆದುಕೊಂಡಿತು.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ್, ಮಾಜಿ ಸಚಿವ ಹಾಗೂ ಶಾಸಕ ಎಂ.ಆರ್. ಪಾಟೀಲ್, ಶಾಸಕ ಸಿ.ಸಿ. ಪಾಟೀಲ್, ಶಾಸಕ ಮಹೇಶ ಟೆಂಗಿನಕಾಯಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲಾಧಿಕಾರಿಗಳು, ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments