Monday, 9 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ಬೆಂಗಳೂರು

ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 60 ವೀಕ್ಷಣೆಗಳು
eye

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದ ನಡುವೆಯೇ ರಾಜಧಾನಿ ಬೆಂಗಳೂರಿನಲ್ಲಿ ಪಟಾಕಿ ಸಿಡಿತದಿಂದ ಸರಣಿ ಅವಘಡಗಳು ಸಂಭವಿಸಿವೆ. ಪಟಾಕಿ ಸಿಡಿಸುವ ವೇಳೆ ಹಾಗೂ ಇತರರು ಸಿಡಿಸುವುದನ್ನು ನೋಡುತ್ತಿದ್ದ ಸಂದರ್ಭದಲ್ಲಿ ಗಾಯಗೊಂಡವರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ.

ಪಟಾಕಿ ಸಿಡಿತದಿಂದ ಗಾಯಗೊಂಡವರನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಹಲವು ಮಕ್ಕಳು ಸೇರಿದ್ದಾರೆ. ಪಟಾಕಿ ಸಿಡಿಸುವಾಗ ಹೊರಬಂದ ಕಿಡಿಗಳು ಕಣ್ಣಿಗೆ ತಗುಲಿ ಕೆಲವರಿಗೆ ಗಂಭೀರ ಗಾಯಗಳಾಗಿವೆ. ಒಬ್ಬ ಬಾಲಕನ ಬಲಗಣ್ಣಿಗೆ ತೀವ್ರ ಹಾನಿಯಾಗಿದ್ದು, ಚಿಕಿತ್ಸೆ ಬಳಿಕ ದೃಷ್ಟಿ ಮರಳುವ ಕುರಿತು ವೈದ್ಯರು ಪರಿಶೀಲಿಸುತ್ತಿದ್ದಾರೆ.

  • ನಾರಾಯಣ ನೇತ್ರಾಲಯ – 27 ಮಂದಿ
  • ಮಿಂಟೋ ಕಣ್ಣಿನ ಆಸ್ಪತ್ರೆ – 20 ಮಂದಿ
  • ಪ್ರಭಾ ಆಸ್ಪತ್ರೆ – 5 ಮಂದಿ
  • ಶಂಕರ ಆಸ್ಪತ್ರೆ – 5ಮಂದಿ

ಪಟಾಕಿ ಸಿಡಿಸುವವರಷ್ಟೇ ಅಲ್ಲದೆ, ಅಕ್ಕಪಕ್ಕದಲ್ಲಿ ನಿಂತು ವೀಕ್ಷಿಸುವವರಿಗೂ ಗಾಯಗಳಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಪಟಾಕಿ ಸಿಡಿಸುವಾಗ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಹಾಗೂ ಮಕ್ಕಳು ಪಟಾಕಿ ಸಿಡಿಸುವ ಸ್ಥಳದಿಂದ ದೂರ ಇರುವಂತೆ ವೈದ್ಯರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಆಟವಾಡುತ್ತಿದ್ದ ಬಾಲಕನ ಬಲಗಣ್ಣಿಗೆ ಪಟಾಕಿ ರಾಕೆಟ್ ಬಡಿದ ಪರಿಣಾಮ ಕಣ್ಣಿನ ದೃಷ್ಟಿಗೆ ಶೇ.80ರಷ್ಟು ಹಾನಿಯಾಗಿರುವ ಘಟನೆ ನಡೆದಿದೆ.

ದೊಡ್ಡಬಳ್ಳಾಪುರದ ಸೋಮೇಶ್ವರ ಬಡಾವಣೆಯ ಸುಜನ್ (12) ದೃಷ್ಟಿ ಹಾನಿಗೊಳಗಾದ ಬಾಲಕ. ಆಟವಾಡುತ್ತಿದ್ದ ಸಂದರ್ಭದಲ್ಲಿ ಮತ್ಯಾರೋ ಸಿಡಿಸಿದ ಪಟಾಕಿ ರಾಕೆಟ್ ಆಕಸ್ಮಿಕವಾಗಿ ಬಾಲಕನ ಬಲಗಣ್ಣಿಗೆ ಬಡಿದಿದೆ. ಪರಿಣಾಮ ಕಣ್ಣಿಗೆ ಗಂಭೀರ ಗಾಯವಾಗಿದ್ದು, ತಕ್ಷಣವೇ ಆಸತ್ರೆಗೆ ದಾಖಲಿಸಲಾಗಿದೆ.

ಬಾಲಕನಿಗೆ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರೂ, ಬಲಗಣ್ಣಿನ ದೃಷ್ಟಿ ಸಂಪೂರ್ಣವಾಗಿ ಮರಳುವ ಸಾಧ್ಯತೆ ಕಡಿಮೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment