Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ
ರಾಜ್ಯ

ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
4 ನಿಮಿಷ ಓದು 51 ವೀಕ್ಷಣೆಗಳು
dk shivakumar

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸಿರುವ ತೀರ್ಮಾನವನ್ನು ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸುವ ಬಗ್ಗೆ ಪ್ರಧಾನಮಂತ್ರಿಗಳಿಗೆ ಪತ್ರ ಬರೆಯಲಾಗುವುದು. ಪ್ರಧಾನಿ ಭೇಟಿ ಸಾಧ್ಯವಾದರೆ ಈ ವಿಚಾರವಾಗಿ ಚರ್ಚೆ ಮಾಡಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ವಿಕಾಸಸೌಧದ ಸಭಾಂಗಣದಲ್ಲಿ ಎಸ್.ಸಿ.ಎಸ್.ಪಿ /ಟಿ.ಎಸ್.ಪಿ ಕಾರ್ಯಕ್ರಮಗಳ 2026-27 ನೇ ಸಾಲಿನ ಕ್ರಿಯಾ ಯೋಜನೆ ಕುರಿತಾದ ರಾಜ್ಯ ಅನುಸೂಚಿತ ಜಾತಿಗಳು ಹಾಗೂ ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ ಸಭೆ ನಡೆಸಿದ ಬಳಿಕ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಗುರುವಾರ ಮಾತನಾಡಿದರು.

ಇಂದು ಬೆಳಗ್ಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಶಾಸಕರು, ಸಚಿವರು, ವಿವಿಧ ನಿಗಮಗಳ ಅಧ್ಯಕ್ಷರುಗಳನ್ನು ಒಳಗೊಂಡಂತೆ ಸಭೆ ನಡೆಸಿದ್ದು, ನಂತರ ಪರಿಷತ್ತಿನ ಸಭೆ ನಡೆಸಿದ್ದೇನೆ. ಬೆಳಗಿನ ಸಭೆಯಲ್ಲಿ ಮೀಸಲಾತಿ ಹೆಚ್ಚಳ, ಒಳ ಮೀಸಲಾತಿ ವಿಚಾರವಾಗಿ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದ್ದು, ನಮ್ಮ ಅರ್ಜಿ ಸ್ವೀಕೃತಗೊಂಡಿದೆ. ಈ ಕಾನೂನು ಹೋರಾಟದಲ್ಲಿ ಯಾರು ರಾಜ್ಯದ ಪರವಾಗಿ ವಾದ ಮಾಡಬೇಕು ಹಾಗೂ ಈ ಪ್ರಕರಣದ ಮೇಲ್ವಿಚಾರಣೆಗೆ ಡಿಸಿಎಂ ಪರಮೇಶ್ವರ್, ಮುನಿಯಪ್ಪ ಹಾಗೂ ಸತೀಶ್ ಜಾರಕಿಹೊಳಿ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಸುಪ್ರೀಂ ಕೋರ್ಟ್ ನಲ್ಲಿ ನಮಗೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸವಿದೆ” ಎಂದು ತಿಳಿಸಿದರು.

“ಈ ವಿಚಾರದಲ್ಲಿ ಹಿಂದೆ ಇದ್ದವರನ್ನು ದೂಷಿಸುವುದರಲ್ಲಿ ಅರ್ಥವಿಲ್ಲ. ಬೇರೆ ಕೆಲವು ರಾಜ್ಯಗಳಲ್ಲಿ ಈ ಬಗ್ಗೆ ತೀರ್ಮಾನವಾಗಿದ್ದು, ತಮಿಳುನಾಡಿನಲ್ಲಿ 69% ಮೀಸಲಾತಿ ಇದೆ. 50% ಮಿಸಲಾತಿಗಿಂತ ನಾವು ಕೇವಲ 6% ವಿಸ್ತರಣೆಗೆ ಮನವಿ ಮಾಡುತ್ತಿದ್ದೇವೆ. ನಾವು ಈಗಾಗಲೇ ಒಳಮೀಸಲಾತಿ ಸಮಸ್ಯೆಯನ್ನು ಬಗೆಹರಿಸಿದ್ದು, ಮುಂದಿನ ಬಜೆಟ್ ನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ಬಜೆಟ್ ನಲ್ಲಿ ಯಾವ ರೀತಿ ಕಾರ್ಯಕ್ರಮ ರೂಪಿಸಬೇಕು ಎಂದು ಈ ಸಮುದಾಯಗಳ ನಾಯಕರ ಬಗ್ಗೆ ಚರ್ಚಿಸಲಾಗಿದೆ. ಈ ವರ್ಗದ ಕಲ್ಯಾಣಕ್ಕೆ ಯಾವ ರೀತಿ ಹೊಸ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ತೀರ್ಮಾನಿಸಲು ವಿಷನ್ ಗ್ರೂಪ್ ಅನ್ನು ರಚಿಸುತ್ತೇನೆ” ಎಂದು ತಿಳಿಸಿದರು.

ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಪರಿಣಾಮ ಅರಿಯಲು ಸಾಮಾಜಿಕ ಆಡಿಟ್ ನಡೆಸಲು ತೀರ್ಮಾನ

“ಈ ವಿಚಾರಗಳ ಬಗ್ಗೆ ಪರಮೇಶ್ವರ್ ಅವರ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚಿಸಲಾಗಿದ್ದು, ನಾವು ಪ್ರಣಾಳಿಕೆಯಲ್ಲಿ ಘೋಷಿಸಿರುವ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಸಿದ್ಧತೆ ಮಾಡಲಾಗುತ್ತಿದೆ. ಕೆಲವು ಯೋಜನೆಗಳು ಓವರ್ ಲ್ಯಾಪಿಂಗ್ ಆಗುತ್ತಿರುವ ಬಗ್ಗೆ ನಮ್ಮ ನಾಯಕರು ಗಮನಸೆಳೆದಿದ್ದಾರೆ. ಇಷ್ಟು ವರ್ಷಗಳ ಕಾಲ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಮೂಲಕ ನೀಡಿರುವ ಅನುದಾನ ಯಾವ ರೀತಿ ಪರಿಣಾಮ ಬೀರಿದೆ ಎಂದು ಅಧ್ಯಯನ ಮಾಡಲು ಪ್ರತಿಷ್ಠಿತ ಸಂಸ್ಥೆಗಳಿಂದ ಸಾಮಾಜಿಕ ಆಡಿಟ್ ಮಾಡಿಸಲು ತೀರ್ಮಾನಿಸಲಾಗಿದೆ” ಎಂದು ಮಾಹಿತಿ ನೀಡಿದರು.

“ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಮೂಲಕ 2025-26ನೇ ಸಾಲಿನಲ್ಲಿನ 42,503 ಕೋಟಿ ಹಾಗೂ ಪ್ರಸಕ್ತ ಸಾಲಿನ 44,631 ಕೋಟಿಯನ್ನು 34 ಇಲಾಖೆಗಳ 451 ಯೋಜನೆಗಳಿಗೆ ಹಂಚಿಕೆ ಮಾಡಲಾಗಿದೆ. ನಮ್ಮ ಶಾಸಕರು ಹಾಗೂ ಸಚಿವರು ಹೊಸ ಆಲೋಚನೆ, ಯೋಜನೆಗಳ ಬಗ್ಗೆ ಸಲಹೆ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಡಿಸಿಎಂ ಪರಮೇಶ್ವರ್ ಅವರ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರೂ ಸೇರಿದಂತೆ ನಮ್ಮ ಎಸ್ ಸಿ, ಎಸ್ ಟಿ ಶಾಸಕರುಗಳು ಎರಡು ದಿನಗಳ ಕಾಲ ಚರ್ಚೆ ಮಾಡಿ ಏನಾದರೂ ಬದಲಾವಣೆ ಮಾಡಲು ಸಾಧ್ಯವೇ? ಎಂದು ಆರ್ಥಿಕ ಇಲಾಖೆ ಜತೆಗೂಡಿ ಚರ್ಚೆ ಮಾಡಿ ನಮಗೆ ವರದಿ ನೀಡಲಿದ್ದಾರೆ” ಎಂದರು.

“ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯ 44,631 ಕೋಟಿ ಸರಿಯಾದ ರೀತಿಯಲ್ಲಿ ಸೇರಬೇಕು ಎಂಬುದು ನಮ್ಮ ಸರ್ಕಾರದ ಚಿಂತನೆಯಾಗಿದ್ದು, ಇದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ. 2001ರಿಂದ 2025ರವರೆಗೆ 19,115 ಬ್ಯಾಕ್ ಲಾಗ್ ಹುದ್ದೆಗಳು ಖಾಲಿ ಇದ್ದು, 17,793 ಹುದ್ದೆಗಳು ಭರ್ತಿಯಾಗಿದ್ದು 1574 ಹುದ್ದೆಗಳು ಬಾಕಿ ಇದ್ದು, ಅವುಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳುತ್ತೇವೆ” ಎಂದರು.

“ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮಾವೇಶ ಮಾಡಲು ಸರ್ಕಾರ ತೀರ್ಮಾನಿಸಿದ್ದು, ನಮ್ಮ ನಾಯಕರು ಚರ್ಚೆ ಮಾಡಿ ಈ ಕಾರ್ಯಕ್ರಮ ಎಲ್ಲಿ ನಡೆಯಬೇಕು ಎಂಬುದರ ಬಗ್ಗೆ ತೀರ್ಮಾನ ಮಾಡಲಿದೆ. ಇದು ಐಕ್ಯತಾ ಸಮಾವೇಶವಾಗಿದ್ದು, ನಾವು ಚುನಾವಣೆಗೂ ಮುನ್ನ ಏನು ಮಾತು ನೀಡಿದ್ದೆವು, ನಾವು ಏನೆಲ್ಲಾ ಈಡೇರಿಸಿದ್ದೇವೆ ಎಂಬುದನ್ನು ಜನರಿಗೆ ತಿಳಿಸುವುದು ನಮ್ಮ ಕರ್ತವ್ಯ. ಅದನ್ನು ಮಾಡುತ್ತೇವೆ” ಎಂದರು.

“ಹಾಸ್ಟೆಲ್ ಹಾಗೂ ಶಾಲಾ ಸಮವಸ್ತ್ರಕ್ಕೆ ಹೊಸ ರೂಪ ನೀಡಲು ಶಿಕ್ಷಣ ಇಲಾಖೆಗೆ ಸೂಚಿಸಿದ್ದೇವೆ. ಮುಂದಿನ ವರ್ಷದಿಂದ ಇವುಗಳನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ. ಖಾಸಗಿ ಶಾಲೆಗಳ ರೀತಿಯಲ್ಲಿ ಸರ್ಕಾರಿ ಶಾಲಾ ಮಕ್ಕಳು ಉತ್ತಮವಾದ ಸಮವಸ್ತ್ರವನ್ನು ಧರಿಸಲಿ. ಅದಕ್ಕೆ ಸ್ವಲ್ಪ ಹೆಚ್ಚಿನ ಹಣ ಬೇಕಾದರೆ ನೀಡೋಣ. ಸಧ್ಯದಲ್ಲೇ ಅಲ್ಪಸಂಖ್ಯಾತ ಶಾಸಕರು ಹಾಗೂ ಸಚಿವರ ಸಭೆ ಕರೆದು ಚರ್ಚೆ ಮಾಡಲಿದ್ದು, ಅದೇ ರೀತಿ ಒಕ್ಕಲಿಗ, ಲಿಂಗಾಯತ ಹಾಗೂ ಹಿಂದುಳಿದ ವರ್ಗದ ನಾಯಕರ ಜತೆಗೆ ಪ್ರತ್ಯೇಕವಾಗಿ ಚರ್ಚೆ ಮಾಡಲಾಗುವುದು. ಅಧಿವೇಶನಕ್ಕೂ ಮುಂಚಿತವಾಗಿಯೇ ನಾನು ಚರ್ಚೆ ಮಾಡಲಾಗುವುದು” ಎಂದು ತಿಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8411 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment