Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಅಪರಾಧ

ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
4 ನಿಮಿಷ ಓದು 61 ವೀಕ್ಷಣೆಗಳು
gyanendra kannale

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮಹತ್ವದ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸೇರಿದಂತೆ ನಾಲ್ವರ ವಿರುದ್ಧ ಬೆಂಗಳೂರಿನ ಪಿಎಂಎಲ್‌ಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಆಗಿನ ಪರೀಕ್ಷಾ ನಿಯಂತ್ರಕಿ ಬಿ.ವಿ. ಗೀತಾ ಶಿವಮೂರ್ತಿ, ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಗಂಗ್ವಾರ್ ಹಾಗೂ ಮಧ್ಯವರ್ತಿ ಬಸವರಾಜ್ ಕನ್ನಾಳೆ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ.

2026ರ ಜನವರಿ 9ರಂದು ನಡೆದ 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೂರು ಪ್ರಕರಣಗಳನ್ನು ಆಧರಿಸಿ ಇ.ಡಿ ತನಿಖೆ ಆರಂಭಿಸಿತ್ತು. ತನಿಖೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ, ಉತ್ತರಗಳ ಕೀ ಹಂಚಿಕೆ ಹಾಗೂ 1:3 ಅರ್ಹತಾ ಪಟ್ಟಿಯ ದುರುಪಯೋಗ ಸೇರಿದಂತೆ ಹಲವು ಅಕ್ರಮಗಳು ಬೆಳಕಿಗೆ ಬಂದಿವೆ.

3.20 ಕೋಟಿ ಬೇಡಿಕೆ:

ಪರೀಕ್ಷಾ ನಿಯಂತ್ರಕರಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರು ಪ್ರಶ್ನೆಪತ್ರಿಕೆಯನ್ನು ಪೆನ್‌ಡ್ರೈವ್‌ಗೆ ನಕಲು ಮಾಡಿಕೊಂಡು ಮಧ್ಯವರ್ತಿ ಬಸವರಾಜ್ ಕನ್ನಾಳೆಗೆ ನೀಡಿದ್ದರು ಎಂದು ಇ.ಡಿ ಆರೋಪಿಸಿದೆ.

ಪರೀಕ್ಷೆಯ ಹಿಂದಿನ ದಿನ ಬೆಂಗಳೂರು ಹೊರವಲಯದ ವಿಲ್ಲಾವೊಂದನ್ನು ಬಾಡಿಗೆಗೆ ಪಡೆದಿದ್ದ ಬಸವರಾಜ್, ಅಲ್ಲಿ ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆಯ ಪ್ರಿಂಟ್‌ಔಟ್ ತೋರಿಸಿದ್ದರು. ಬಳಿಕ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಪೆನ್‌ಡ್ರೈವ್ ಸುಟ್ಟುಹಾಕಿದ್ದರು ಎನ್ನಲಾಗಿದೆ.

ಈ ಡೀಲ್‌ಗಾಗಿ 10 ಅಭ್ಯರ್ಥಿಗಳಿಂದ ಒಟ್ಟು ₹3.20 ಕೋಟಿ ಬೇಡಿಕೆಯಿಡಲಾಗಿತ್ತು. ಈ ಪೈಕಿ ₹1.52 ಕೋಟಿ ವಸೂಲಿ ಮಾಡಿರುವ ದಾಖಲೆಗಳು ಪತ್ತೆಯಾಗಿವೆ. ₹92 ಲಕ್ಷವನ್ನು ಬ್ಯಾಂಕ್ ಖಾತೆಗಳ ಮೂಲಕ ಹಾಗೂ ₹60 ಲಕ್ಷವನ್ನು ನಗದು ರೂಪದಲ್ಲಿ ಪಡೆದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಉಳಿದ ಹಣಕ್ಕೆ ಭದ್ರತೆಯಾಗಿ ಅಭ್ಯರ್ಥಿಗಳಿಂದ ಖಾಲಿ ಚೆಕ್ ಮತ್ತು ಪ್ರಾಮಿಸರಿ ನೋಟ್‌ಗಳನ್ನು ಪಡೆಯಲಾಗಿತ್ತು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಕಾರಿನಲ್ಲೇ 20 ಲಕ್ಷ ಲಂಚ:

ಮಾಜಿ ಅಧ್ಯಕ್ಷ ಸಾಹುಕಾರ್ ಸೂಚನೆಯಂತೆ ಗಂಗ್ವಾರ್ ಅವರು ಆರು ಅಭ್ಯರ್ಥಿಗಳ ಸರಿಯಾದ ಉತ್ತರಗಳ ಕೀ ಅನ್ನು ಕೆಪಿಎಸ್‌ಸಿ ಸದಸ್ಯೆ ಗೀತಾ ಅವರಿಗೆ ನೀಡಿದ್ದರು. ಇದಕ್ಕೆ ಪ್ರತಿಯಾಗಿ ತಮಗೆ ಬೇಕಾದ ಅಭ್ಯರ್ಥಿಗೆ ಕೆಎಎಸ್ ಸಂದರ್ಶನದಲ್ಲಿ ಹೆಚ್ಚಿನ ಅಂಕ ಕೊಡಿಸುವ ಭರವಸೆಯನ್ನು ಗಂಗ್ವಾರ್ ಪಡೆದಿದ್ದರು ಎಂದು ಇ.ಡಿ ಆರೋಪಿಸಿದೆ.

ಈ ವ್ಯವಹಾರದಲ್ಲಿ ಸಾಹುಕಾರ್ ಒಬ್ಬ ಅಭ್ಯರ್ಥಿಯಿಂದ ₹10 ಲಕ್ಷ ಪಡೆದಿದ್ದರೆ, ಜನವರಿ 8ರಂದು ಗೀತಾ ಅವರು ತಮ್ಮ ಕಾರಿನಲ್ಲೇ ಮತ್ತೊಬ್ಬ ಅಭ್ಯರ್ಥಿಯಿಂದ ₹20 ಲಕ್ಷ ನಗದು ಪಡೆದಿರುವುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ತಿಳಿಸಲಾಗಿದೆ.

ಗೆಳತಿಗೆ ₹52.30 ಲಕ್ಷದ ಚಿನ್ನ ಗಿಫ್ಟ್!

ಮಧ್ಯವರ್ತಿ ಬಸವರಾಜ್‌ನಿಂದ ಪಡೆದ ₹1.52 ಕೋಟಿ ಅಕ್ರಮ ಹಣದಲ್ಲಿ ಜ್ಞಾನೇಂದ್ರ ಕುಮಾರ್ ಅವರು ತಾವು ವಿವಾಹವಾಗಲಿರುವ ಯುವತಿಯ ಹೆಸರಿನಲ್ಲಿ ₹52.30 ಲಕ್ಷ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣಗಳನ್ನು ಖರೀದಿಸಿದ್ದಾರೆ ಎಂದು ಇ.ಡಿ ಆರೋಪಿಸಿದೆ. ಇದಲ್ಲದೆ, ₹13.31 ಲಕ್ಷವನ್ನು ವಿಮಾನ ಪ್ರಯಾಣಕ್ಕಾಗಿ ಖರ್ಚು ಮಾಡಿರುವುದೂ ತನಿಖೆಯಲ್ಲಿ ಪತ್ತೆಯಾಗಿದೆ.

ಈ ಹಗರಣದ ಮೂಲಕ ಶಿವಶಂಕರಪ್ಪ ಸಾಹುಕಾರ್ ₹4.17 ಕೋಟಿ ಸಂಪಾದಿಸಿರುವುದಾಗಿ ಇ.ಡಿ ಆರೋಪಿಸಿದೆ. 2025ರ ಆಗಸ್ಟ್‌ನಿಂದ ಡಿಸೆಂಬರ್ ಅವಧಿಯಲ್ಲಿ ₹3.99 ಕೋಟಿಯನ್ನು ರಿಯಲ್ ಎಸ್ಟೇಟ್ ಡೆವಲಪರ್ ಒಬ್ಬರ ಬಳಿ ಹೂಡಿಕೆ ಮಾಡಿದ್ದರು ಎನ್ನಲಾಗಿದೆ. ಇದಕ್ಕೂ ಮೊದಲು ₹8ರಿಂದ ₹10 ಕೋಟಿ ಹಣ ಹೂಡಿಕೆ ಮಾಡಿದ್ದ ಮಾಹಿತಿಯೂ ತನಿಖೆಯಲ್ಲಿ ಲಭ್ಯವಾಗಿದೆ.

ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ:

ಇನ್ನು ಹಗರಣದ ಮೂಲಕ ₹1.48 ಕೋಟಿ ಗಳಿಸಿರುವ ಆರೋಪ ಎದುರಿಸುತ್ತಿರುವ ಗೀತಾ, ಸಾಹುಕಾರ್ ಅವರಿಂದ ಯಾವುದೇ ಒಪ್ಪಂದವಿಲ್ಲದೆ ಸಾಲದ ಹೆಸರಿನಲ್ಲಿ ₹1 ಕೋಟಿ ಪಡೆದಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಹಣವನ್ನು ತಮ್ಮ ಹಾಗೂ ಪುತ್ರಿಯ ಹೆಸರಿನಲ್ಲಿ ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡುವುದರ ಜತೆಗೆ, ಶಹಾಪುರದ ಮದ್ರಾಕಿಯಲ್ಲಿ ಶಾಲೆ, ಕನ್ವೆನ್ಷನ್ ಹಾಲ್ ಮತ್ತು ಹೋಟೆಲ್ ನಿರ್ಮಾಣಕ್ಕೆ ಬಳಸಲು ಯೋಜಿಸಿದ್ದರು ಎನ್ನಲಾಗಿದೆ.

ಹಣ ವರ್ಗಾವಣೆ:
ಮಧ್ಯವರ್ತಿ ಬಸವರಾಜ್ ಕನ್ನಾಳೆ ಕೂಡ ₹1.52 ಕೋಟಿ ಅಕ್ರಮವಾಗಿ ಸಂಪಾದಿಸಿರುವ ಆರೋಪ ಎದುರಿಸುತ್ತಿದ್ದಾರೆ. ಭಾಲ್ಕಿಯ ಓಂ ಲಕ್ಷ್ಮಿ ಸೌಹಾರ್ದ ಸಹಕಾರಿ ಸಂಘ, ಭಗವತಿ ಎಂಟರ್‌ಪ್ರೈಸಸ್ ಹಾಗೂ ಸಂಬಂಧಿಕರ ಬ್ಯಾಂಕ್ ಖಾತೆಗಳ ಮೂಲಕ ಹಣ ವರ್ಗಾವಣೆ ಮಾಡಿ ಜಮೀನು ಖರೀದಿಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

37 ಸ್ಥಳಗಳಲ್ಲಿ ಶೋಧ:

ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಒಟ್ಟು 37 ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. ಸೆಪ್ಟೆಂಬರ್ 17ರಂದು ಬಸವರಾಜ್ ಕನ್ನಾಳೆ, ಸೆಪ್ಟೆಂಬರ್ 18ರಂದು ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಹಾಗೂ ಅಕ್ಟೋಬರ್ 6ರಂದು ಶಿವಶಂಕರಪ್ಪ ಸಾಹುಕಾರ್ ಮತ್ತು ಗೀತಾ ಅವರನ್ನು ಬಂಧಿಸಿದ್ದರು.

ಆರೋಪಿಗಳಿಗೆ ಸೇರಿದ ₹1.22 ಕೋಟಿ ಮೌಲ್ಯದ ಆಸ್ತಿಯನ್ನು ಈಗಾಗಲೇ ಜಪ್ತಿ ಮಾಡಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಕೆಪಿಎಸ್‌ಸಿ ಅಧಿಕಾರಿಗಳು ಹಾಗೂ ಮಧ್ಯವರ್ತಿಗಳ ಪಾತ್ರದ ಬಗ್ಗೆಯೂ ಇ.ಡಿ ತನಿಖೆ ಮುಂದುವರಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment