ನವದೆಹಲಿ: ನವೆಂಬರ್ 30ರಿಂದ 3 ದಿನಗಳ ಸಂಸತ್ತಿನ ಉಭಯ ಸದನಗಳ ಕಲಾಪ ಆರಂಭವಾಗಲಿದೆ.
ನ.30ರಂದು ಲೋಕಸಭೆ ಹಾಗೂ ಡಿ. 2ರಂದು ರಾಜ್ಯಸಭೆ ಸಮಾವೇಶಗೊಳ್ಳಲಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.
ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲು ವಿಧೇಯಕ ಸೇರಿದಂತೆ ಹಲವು ಮಹತ್ವದ ವಿಧೇಯಕ ಜಾರಿ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ 3 ದಿನಗಳ ವಿಶೇಷ ಅಧಿವೇಶನ ನಡೆಯಲಿದೆ ಎಂದು ಹೇಳಲಾಗಿದೆ.
ಮುಖ್ಯವಾಗಿ ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮಹಿಳಾ ಮೀಸಲಾತಿಜಾರಿಗೆ ಸಂಬಂಧಿಸಿದ ಮಹತ್ವದ ಮಸೂದೆಗಳನ್ನು ಸರ್ಕಾರ ಮಂಡಿಸಬಹುದು ಎಂಬ ಊಹಾಪೋಹಗಳು ದಟ್ಟವಾಗಿವೆ. ಆದರೆ ಸರ್ಕಾರದ ಅಧಿಕೃತ ಪ್ರಕಟಣೆಯಲ್ಲಿ ಯಾವೆಲ್ಲಾ ಮಸೂದೆಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂಬುದನ್ನು ಇನ್ನೂ ಬಹಿರಂಗಪಡಿಸಿಲ್ಲ.
