Thursday, 26 November 2026 — Kannadavahini
BREAKING NEWS
ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಬೆಂಗಳೂರು ನಮ್ಮ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಚಾಲಕ ರಹಿತ ರೈಲು ಸಂಚಾರ ಆರಂಭ ರಾಜ್ಯ ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು ದೇಶ ದಿಢೀರ್ 3 ದಿನಗಳ ಸಂಸತ್ ಅಧಿವೇಶನ ಕರೆದ ಕೇಂದ್ರ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು
ರಾಜ್ಯ

ಮದುವೆಗೆ ಬಂದಿದ್ದ ಬೆಂಗಳೂರಿನ ನಾಲ್ವರು ಯುವಕರು ತುಂಗಾ ನದಿ ಪಾಲು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 11 ವೀಕ್ಷಣೆಗಳು
drown
drown

ಶಿವಮೊಗ್ಗ: ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಬಂದಿದ್ದ ಮೂವರು ಕಾನೂನು ವಿದ್ಯಾರ್ಥಿಗಳು ಸೇರಿ ನಾಲ್ವರು ಯುವಕರು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ತೀರ್ಥಹಳ್ಳಿ ತಾಲೂಕಿನ ಮಹಿಷಿ ಗ್ರಾಮದ ಬಳಿ ಗುರುವಾರ ಸಂಭವಿಸಿದೆ.

ಬೆಂಗಳೂರಿನ ಕಾರ್ತಿಕ್ (31), ಪವನ್ (30), ನಕುಲ್ (19) ಹಾಗೂ ಚೇತನ್ (19) ನೀರುಪಾಲಾದ ಯುವಕರಾಗಿದ್ದಾರೆ.
ಇಟ್ಟಮಡುವಿನ ಪವನ್, ಕತ್ರಿಗುಪ್ಪೆಯ ಕಾರ್ತಿಕ್ ಹಾಗೂ ತಲಘಟ್ಟಪುರದ ನಕುಲ್ ಕಾನೂನು ವ್ಯಾಸಂಗ ಮಾಡುತ್ತಿದ್ದರು. ಚೇತನ್ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.

ನಾಲ್ವರು ಯುವಕರು ಮದುವೆ ಸಮಾರಂಭ ಮುಗಿಸಿಕೊಂಡು ಸ್ವಲ್ಪ ಸಮಯ ಕಳೆಯಲು ಸಮೀಪದ ಪ್ರವಾಸಿ ಸ್ಥಳವೊಂದಕ್ಕೆ ತೆರಳಲು ನಿರ್ಧರಿಸಿದ್ದರು. ಈ ಹಿನ್ನೆಲೆಯಲ್ಲಿ ಗೂಗಲ್‌ನಲ್ಲಿ ನದಿ ಪ್ರದೇಶಗಳ ಬಗ್ಗೆ ಹುಡುಕಾಟ ನಡೆಸಿದಾಗ ಮಹಿಷಿ ಗ್ರಾಮದ ಬಳಿಯ ತುಂಗಾ ನದಿ ಕಾಣಿಸಿಕೊಂಡಿದೆ. ಬಳಿಕ ಗೂಗಲ್ ಮ್ಯಾಪ್ ಸಹಾಯದಿಂದ ನದಿ ತೀರಕ್ಕೆ ತೆರಳಿದ್ದಾರೆ.

ಈ ವೇಳೆ ನದಿಯಲ್ಲಿ ಆಟವಾಡುತ್ತಿದ್ದಾಗ ಓರ್ವ ಯುವಕ ನೀರಿನಲ್ಲಿ ಮುಳುಗಿದ್ದಾನೆ. ಆತನನ್ನು ರಕ್ಷಿಸಲು ಮುಂದಾದ ಉಳಿದ ಮೂವರು ಕೂಡ ಒಬ್ಬರ ಹಿಂದೆ ಒಬ್ಬರು ನದಿಗೆ ಇಳಿದು ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.

ಘಟನೆ ತಿಳಿಯುತ್ತಿದ್ದಂತೆ ಮಾಳೂರು ಪೊಲೀಸ್ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ನಾಪತ್ತೆಯಾಗಿರುವ ಮೂವರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8449 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment