1975ರಲ್ಲಿ ದೇಶದಲ್ಲಿ ಹೇರಲಾದ ತುರ್ತು ಪರಿಸ್ಥಿತಿ ಅಸಂವಿಧಾನಿಕವಾಗಿದ್ದು, ಸಂವಿಧಾನದ ಮೇಲೆ ನಡೆದ ದಾಳಿಯಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮರ್ಮು ಲೋಕಸಭೆಯ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಿದರು.
ಗುರುವಾರ 18ನೇ ಲೋಕಸಭೆಯ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದರು. ಇದು ರಾಷ್ಟ್ರಪತಿಯಾಗಿ ಆಯ್ಕೆ ಆದ ನಂತರ ಜಂಟಿ ಅಧಿವೇಶನದಲ್ಲಿ ಮಾಡಿದ ಮೊದಲ ಭಾಷಣ ಆಗಿದೆ.
ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತ ಕಳೆದ ದಶಕಗಳಲ್ಲಿ ಹಲವಾರು ಸವಾಲುಗಳನ್ನು ಎದುರಿಸುತ್ತಾ ಬಂದಿದೆ. ಇಂದು ಜೂನ್ 27, ತುರ್ತು ಪರಿಸ್ಥಿತಿ ಹೇರಿದ್ದು 1975 ಜೂನ್ 25ರಂದು ಇಂದಿಗೆ 50 ವರ್ಷ ಆಗಿದ್ದು, ದೇಶದ ಅತ್ಯಂತ ಕರಾಳ ಅಧ್ಯಾಯವಾಗಿದೆ ಎಂದರು.
ರಾಷ್ಟ್ರಪತಿ ಹೇಳಿಕೆಗೆ ಆಡಳಿತಾರೂಢ ಪಕ್ಷದ ಸದಸ್ಯರು ಬೆಂಚು ತಟ್ಟಿ ಬೆಂಬಲ ವ್ಯಕ್ತಪಡಿಸಿದರೆ, ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಈಗ ಆಘೋಷಿತ ತುರ್ತುಪರಿಸ್ಥಿತಿ ಹೇರಿರುವುದನ್ನು ಯಾಕೆ ಪ್ರಸ್ತಾಪಿಸುತ್ತಿಲ್ಲ ಎಂದು ಪ್ರತಿಭಟನೆ ನಡೆಸಿದರು.