ವಂದೇ ಭಾರತ್ ರೈಲುಗಳ ಪ್ರಯಾಣ ದರದಲ್ಲಿ ಪರಿಷ್ಕರಣೆ ಮಾಡಲಾಗುವುದು ಎಂದು ಕೇಂದ್ರ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಂದೇ ಭಾರತ್ ರೈಲಿನ ಪ್ರಯಾಣ ದರದ ಬಗ್ಗೆ ಚರ್ಚೆ ನಡೆಯುತ್ತಿದೆ. ಬಡ, ಮಧ್ಯಮ ವರ್ಗದ ಜನರು ಕೂಡ ವಂದೇ ಭಾರತ್ ರೈಲಿನಲ್ಲಿ ಪ್ರಯಾಣ ಮಾಡುವಂತಾಗಬೇಕು ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಮ್ಮತದಿಂದ ಕೆಲಸ ಮಾಡಿದರೆ ಅಭಿವೃದ್ಧಿ ವೇಗ ಹೆಚ್ಚಾಗುತ್ತದೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಪಾಲು ಬಂದಿಲ್ಲ. ಈ ಬಗ್ಗೆ ಚರ್ಚೆ ಮಾಡಿ ಬಗೆಗಹರಿಸಿಕೊಳ್ಳೋಣ ಎಂದು ಅವರು ಹೇಳಿದರು.
ವಂದೇ ಭಾರತ್ ರೈಲಿನಲ್ಲಿ ಇತ್ತೀಚೆಗೆ ಟಿಕೆಟ್ ಇಲ್ಲದೇ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಟಿಕೆಟ್ ಪಡೆದು ಪ್ರಯಾಣಿಸುವವರ ಸಂಖ್ಯೆಯಲ್ಲಿ ಇಳಿಮುಖ ಆಗುತ್ತಿರುವ ಬಗ್ಗೆ ಅಧಿಕಾರಿಗಳ ಜೊತೆ ಮಾತುಕತೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಬೆಂಗಳೂರಿಗೆ ಸಬರ್ಬನ್ ರೈಲು ವ್ಯವಸ್ಥೆ ಬರಲಿದ್ದು, ಇದರಿಂದ ರಾಜಧಾನಿಯ ಸಂಚಾರ ವ್ಯವಸ್ಥೆ ಸುಧಾರಿಸಲಿದೆ ಎಂದು ಕೇಂದ್ರದ ಜಲಶಕ್ತಿ ಮತ್ತು ರೇಲ್ವೇ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
ಸಿಲಿಕಾನ್ ಸಿಟಿಯಲ್ಲಿ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟೂ ಉತ್ತಮವಾಗಲಿಸಲು ಈಗಾಗಲೇ ವರ್ತುಲ ರೈಲು ವ್ಯವಸ್ಥೆಗೆ ನೀಲನಕ್ಷೆ ಸಿದ್ಧಪಡಿಸಲಾಗಿದೆ. 287 km ಉದ್ದದ ವರ್ತುಲ ರೈಲು ಯೋಜನೆ ಇದಾಗಿದ್ದು, ಈ ಸಂಬಂಧ ಕೇಂದ್ರವು 23 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ಹೇಳಿದರು.