ಜನತಾದಳ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ಮರು ಆಯ್ಕೆಯಾಗಿದ್ದರೆ, ಕಾರ್ಯಾಧ್ಯಕ್ಷರಾಗಿ ರಾಜ್ಯಸಭಾ ಸದಸ್ಯ ಸಂಜಯ್ ಕುಮಾರ್ ನೇಮಕಗೊಂಡಿದ್ದಾರೆ.
ಶುಕ್ರವಾರ ನಡೆದ ಜೆಡಿಯು ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ರಾಜ್ಯಸಭಾ ಸದಸ್ಯ ಸಂಜಯ್ ಕುಮಾರ್ ಜಾ ಪಕ್ಷದ ಮುಖಂಡರಾಗಿದ್ದಾರೆ.
ಬಿಜೆಪಿ ಜೊತೆ ಜೆಡಿಯು ಉತ್ತಮ ಬಾಂಧವ್ಯ ಉಳಿಸಿಕೊಳ್ಳಬೇಕಾದರೆ ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಿ ಅನುದಾನ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆಯಲು ಬಿಜೆಪಿ ವಿಫಲವಾಗಿರುವುದರಿಂದ ಜೆಡಿಯು ಕಿಂಗ್ ಮೇಕರ್ ಆಗಿ ಬದಲಾಗಿದ್ದು, ದೇಶಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ನೀಟ್ ಪರೀಕ್ಷಾ ಅಕ್ರಮ ತಡೆಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ,