ಹಿಮ್ಮಡಿ ನೋವಿನಿಂದ ಚೇತರಿಸಿಕೊಳ್ಳುತ್ತಿರುವ ಸ್ಫೋಟಕ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಮಾರ್ಚ್ ಕೊನೆಯ ವಾರದಲ್ಲಿ ಆರಂಭಗೊಳ್ಳಲಿರುವ ಐಪಿಎಲ್ ಟಿ-20 ಟೂರ್ನಿ 2024ರ ಆವೃತ್ತಿಯ ಮೊದಲೆರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.
ಪ್ರಸ್ತುತ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಶಿಬಿರದಲ್ಲಿ ತಂಗಿರುವ ಸೂರ್ಯಕುಮಾರ್ ಯಾದವ್, ಮುಂಬೈ ಇಂಡಿಯನ್ಸ್ ತಂಡದ ಪರ ಮೊದಲೆರಡು ಪಂದ್ಯಗಳಿಗೆ ಲಭ್ಯರಾಗುವುದು ಅನುಮಾನವಾಗಿದೆ.
ಮಾರ್ಚ್ 24ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಆಡುವ ಮೂಲಕ ಮುಂಬೈ ಇಂಡಿಯನ್ಸ್ ಐಪಿಎಲ್ ನಲ್ಲಿ ಈ ಬಾರಿ ಅಭಿಯಾನ ಆರಂಭಿಸಲಿದೆ. ಹೊಸದಾಗಿ ನಾಯಕ ಸ್ಥಾನ ಅಲಂಕರಿಸಿರುವ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯುವುದು ಅನುಮಾನವಾಗಿದೆ. ಇದರಿಂದ ಮುಂಬೈಗೆ ಆರಂಭದಲ್ಲೇ ಆಘಾತ ಉಂಟಾಗಿದೆ.