ರೋಹಿತ್ ಶರ್ಮ ಸಾರಥ್ಯ, ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಅಬ್ಬರ, ಬೌಲರ್ ಗಳ ಮಾರಕ ದಾಳಿ ಸೇರಿದಂತೆ ಸಂಘಟಿತ ಪ್ರದರ್ಶನದಿಂದ 17 ವರ್ಷಗಳ ನಂತರ ಟಿ-20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 20.42 ಕೋಟಿ ರೂ. ಬಹುಮಾನ ಮೊತ್ತ ಲಭಿಸಿದೆ.
ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಜಂಟಿ ಆತಿಥ್ಯದಲ್ಲಿ ನಡೆದ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಅಜೇಯವಾಗಿ ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತ ತಂಡ 17 ವರ್ಷಗಳ ನಂತರ ಟಿ-20 ವಿಶ್ವಕಪ್ ಗೆದ್ದ ಸಾಧನೆ ಮಾಡಿತ್ತು. ಅಲ್ಲದೇ 2011ರ ಏಕದಿನ ವಿಶ್ವಕಪ್ ನಂತರ ಬಂದ ವಿಶ್ವಕಪ್ ಟ್ರೋಫಿ ಆಗಿತ್ತು.
ಭಾರತ ತಂಡ 2007ರ ಚೊಚ್ಚಲ ಆವೃತ್ತಿಯಲ್ಲಿ ಧೋನಿ ಸಾರಥ್ಯದಲ್ಲಿ ಟಿ-20 ವಿಶ್ವಕಪ್ ಗೆದ್ದ ನಂತರ ಮೂರು ಬಾರಿ ಫೈನಲ್ ಪ್ರವೇಶಿಸಿದ್ದರೂ ಪ್ರಶಸ್ತಿ ಗೆಲ್ಲಲು ವಿಫಲವಾಗಿತ್ತು. ಆದರೆ ಈ ಬಾರಿ ಅಜೇಯವಾಗಿ ಫೈನಲ್ ಪ್ರವೇಶಿಸಿದ್ದ ದಕ್ಷಿಣ ಆಫ್ರಿಕಾ ತಂಡವನ್ನು 7 ರನಗಳಿದ ಸೋಲಿಸಿ ಪ್ರಶಸ್ತಿಗೆ ಮುತ್ತಿಕ್ಕಿತು.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ 6 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತು. ವಿಶ್ವಕಪ್ ಫೈನಲ್ ನಲ್ಲಿ ಅತ್ಯಧಿಕ ಮೊತ್ತ ದಾಖಲಿಸಿದ ಗೌರವಕ್ಕೆ ಭಾರತ ಪಾತ್ರವಾಯಿತು. ದಕ್ಷಿಣ ಆಫ್ರಿಕಾ ತಂಡ 1638 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲುಂಡಿತು.
ಪ್ರಶಸ್ತಿ ಗೆದ್ದ ಭಾರತ ತಂಡಕ್ಕೆ 2.45 ದಶಲಕ್ಷ ಡಾಲರ್ ಅಂದರೆ ಸುಮಾರು 20.42 ಕೋಟಿ ರೂ. ಬಹುಮಾನ ಮೊತ್ತ ಲಭಿಸಿದರೆ, ಫೈನಲ್ ತಲುಪಿದ ಸಾಧನೆ ಮಾಡಿದ್ದ ದಕ್ಷಿಣ ತಂಡ 1.45 ದಶಲಕ್ಷ ಡಾಲರ್ (10.67 ಕೋಟಿ ರೂ.) ಬಹುಮಾನ ಮೊತ್ತ ಗಳಿಸಿತು.
ಇದೇ ಮೊದಲ ಬಾರಿ ಸೆಮಿಫೈನಲ್ ಪ್ರವೇಶಿಸಿದ್ದ ಆಫ್ಘಾನಿಸ್ತಾನ ಮತ್ತು ಮಾಜಿ ಚಾಂಪಿಯನ್ ಇಂಗ್ಲೆಂಡ್ ತಂಡಗಳು 6.56 ಕೋಟಿ ರೂ. ಗಳಿಸಿದೆ.