ಬೆಂಗಳೂರು: ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಅಸಹಜ ಲೈಂಗಿಕ ದೌರ್ಡನ್ಯ ಆರೋಪ ಪ್ರಕರಣದಲ್ಲಿ ಎಂಎಲ್ ಸಿ ಸೂರಜ್ ರೇವಣ್ಣಗೆ 2 ದಿನ ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ. ಈ ಮೂಲಕ ಸೂರಜ್ ರೇವಣ್ಣಗೆ ಬಿಗ್ ಶಾಕ್ ನೀಡಲಾಗಿದೆ.
ಈ ಕುರಿತಂತೆ ಸೂರಜ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನಲೆಯಲ್ಲಿ, ಅವರನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆ ನಡೆಸೋದಕ್ಕಾಗಿ 5 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಕೋರಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಯಮೂರ್ತಿಗಳು, ಯುವಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಮತ್ತಷ್ಟು ವಿಚಾರಣೆ ನಡೆಸೋದಕ್ಕೆ 2 ದಿನ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಅಂದಹಾಗೇ ಜೂನ್.22ರಂದು ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ದಾಖಲಾಗಿತ್ತು. ಆ ಬಳಿಕ ಮತ್ತೊಂದು ಪ್ರಕರಣ ದಾಖಲಾಗಿತ್ತು. ಈ ಎರಡು ಪ್ರಕರಣಗಳನ್ನು ರಾಜ್ಯ ಸರ್ಕಾರವು ಸಿಐಡಿ ವಶಕ್ಕೆ ನೀಡಿ ಆದೇಶಿಸಿತ್ತು.