ತೆಪ್ಪ ಮುಗುಚಿ 6 ಜನರು ಮೃತಪಟ್ಟಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಕೃಷ್ಣಾ ನದಿಯಲ್ಲಿ ಸಂಭವಿಸಿದೆ.
ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿಯ ಕೃಷ್ಣಾ ನದಿಯಲ್ಲಿ ನೀರುಪಾಲಾಗಿರುವ ಪೈಕಿ ಪುಂಡಲಿಕ ಎಂಕಂಚಿ (34) ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಉಳಿದವರ ಶೋಧ ಕಾರ್ಯ ಮುಂದುವರಿದಿದೆ.
ನದಿ ಆಚೆಯ ನಡುಗಡ್ಡೆಗೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಸ್ಥಳಕ್ಕೆ ಭೇಟಿ ನೀಡಿ ಕೊಲ್ಹಾರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಕೊಲ್ಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದ್ದು, ಸ್ಥಳೀಯರು ಹಾಗೂ ಅಧಿಕಾರಿಗಳಿಂದ ನೀರು ಪಾಲಾದವರಿಗಾಗಿ ಶೋಧಕಾರ್ಯ ನಡೆಯುತ್ತಿದೆ.