Saturday, November 23, 2024
Google search engine
Homeಅಪರಾಧಕಾಂಗ್ರೆಸ್ ಕಾರ್ಯಕರ್ತನ ಅಟ್ಟಾಡಿಸಿ ಕೊಂದು ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು!

ಕಾಂಗ್ರೆಸ್ ಕಾರ್ಯಕರ್ತನ ಅಟ್ಟಾಡಿಸಿ ಕೊಂದು ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು!

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಹೊತ್ತಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು ಶವವನ್ನು ಜಮೀನಿನ ಮರಕ್ಕೆ ನೇಣು ಹಾಕಿದ ಆಘಾತಕಾರಿ ಘಟನೆ ಗದಗದಲ್ಲಿ ನಡೆದಿದೆ.

ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖ ಕಾರ್ಯಕರ್ತ ಡೋಣಿ ಗ್ರಾಮದ ಶರಣಪ್ಪ ಸಂದಿಗೌಡ್ರ ಕೊಲೆಯಾಗಿದ್ದು, ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದ ಬಳಿ ಜಮೀನಿನಲ್ಲಿ ಅವರ ಶವ ಮರಕ್ಕೆ ನೇತು ಹಾಕಲಾಗಿದೆ.

ರೋಣ ವಿಧಾನಸಭಾ ಕ್ಷೇತ್ರದ ಡಂಬಳ ಹೋಬಳಿಯ ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಸಿದ್ಧತೆ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.

ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ಮಾಡಿರುವ ದುಷ್ಕರ್ಮಿಗಳು, ಕಣ್ಣಿಗೆ ಕಾರದಪುಡಿ ಎಸೆದು ಹಲ್ಲೆ ಮಾಡಿದ್ದಾರೆ. ನಂತರ ಶವ ತೂಗು ಹಾಕಿ ವಿಕೃತಿ ಮೆರೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಂಗಳವಾರ ಬೆಳಿಗ್ಗೆ ಮರದಲ್ಲಿ ನೇತಾಡುತ್ತಿರುವ ಶವ ನೋಡಿದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಯಾವ ಕಾರಣಕ್ಕಾಗಿ ಈ ಕೊಲೆ ನಡೆದಿದೆ ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ.

ಘಟನೆಯ ಸುದ್ದಿ ತಿಳಿದ ಮುಂಡರಗಿ ಠಾಣೆಯ ಇನ್ಸ್‌ಪೆಕ್ಟರ್ ಮಂಜುನಾಥ್ ಕುಸುಗಲ್ಲ‌ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆ ಯಾವ ಕಾರಣಕ್ಕಾಗಿ ನಡೆದಿರಬಹುದು ಎಂದು ಮಾಹಿತಿ ಕಲೆ ಹಾಕುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments