ಕರ್ತವ್ಯ ನಿರತರಾಗಿದ್ದಾಗ ಹುತಾತ್ಮರಾದ ಅಗ್ನಿವೀರ್ ಅಜಯ್ ಕುಮಾರ್ ಕುಟುಂಬಕ್ಕೆ 98 ಲಕ್ಷ ರೂ. ಪಾವತಿಸಲಾಗಿದೆ ಎಂದು ಭಾರತೀಯ ಸೇನೆ ಸ್ಪಷ್ಟನೆ ನೀಡಿದೆ.
ಅಗ್ನಿವೀರ್ ಕುಟುಂಬಕ್ಕೆ 1 ಕೋಟಿ ರೂ. ನೀಡಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸುಳ್ಳು ಹೇಳಿದ್ದಾರೆ ಎಂದು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪದ ಬೆನ್ನಲ್ಲೆ ಬುಧವಾರ ತಡರಾತ್ರಿ ಭಾರತೀಯ ಸೇನೆ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದೆ.
ಗಡಿಯಲ್ಲಿ ಕರ್ತವ್ಯ ನಿರತ ವೇಳೆ ಅಗ್ನಿವೀರ್ ಅಜಯ್ ಕುಮಾರ್ ಹುತಾತ್ಮರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ 98.39 ಲಕ್ಷ ರೂ. ಪರಿಹಾರ ಧನ ತಲುಪಿಸಲಾಗಿದೆ ಎಂದು ಭಾರತೀಯ ಸೇನೆ ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದೆ.
ಭಾರತೀಯ ಸೇನೆ ರಾಹುಲ್ ಗಾಂಧಿ ಹೆಸರನ್ನು ಉಲ್ಲೇಖಿಸದೇ ಸಾಮಾಜಿಕ ಜಾಲತಾಣದಲ್ಲಿ ಅಗ್ನಿವೀರ್ ಕುಟುಂಬಕ್ಕೆ ಪರಿಹಾರ ನೀಡಲಾಗಿಲ್ಲ ಎಂದು ಹರಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದ್ದು, ಅವರ ಕುಟುಂಬಕ್ಕೆ ಪರಿಹಾರ ಮೊತ್ತ ತಲುಪಿಸಲಾಗಿದೆ ಎಂದು ಎಕ್ಸ್ ಪೋಸ್ಟ್ ನಲ್ಲಿ ವಿವರಿಸಿದೆ.
*CLARIFICATION ON EMOLUMENTS TO AGNIVEER AJAY KUMAR*
Certain posts on Social Media have brought out that compensation hasn't been paid to the Next of Kin of Agniveer Ajay Kumar who lost his life in the line of duty.
It is emphasised that the Indian Army salutes the supreme… pic.twitter.com/yMl9QhIbGM
— ADG PI – INDIAN ARMY (@adgpi) July 3, 2024