Thursday, November 21, 2024
Google search engine
Homeಅಪರಾಧಬಿಎಸ್ ಪಿ ತಮಿಳುನಾಡು ರಾಜ್ಯಾಧ್ಯಕ್ಷರ ಹತ್ಯೆ: 8 ಮಂದಿ ವಶಕ್ಕೆ ಪಡೆದ ಚೆನ್ನೈ ಪೊಲೀಸರು

ಬಿಎಸ್ ಪಿ ತಮಿಳುನಾಡು ರಾಜ್ಯಾಧ್ಯಕ್ಷರ ಹತ್ಯೆ: 8 ಮಂದಿ ವಶಕ್ಕೆ ಪಡೆದ ಚೆನ್ನೈ ಪೊಲೀಸರು

ಬಹುಜನ ಸಮಾಜವಾದಿ ಪಕ್ಷದ ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮಾಸ್ಟ್ರಾಂಗ್ ಅವರ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಚೆನ್ನೈ ಪೊಲೀಸರು 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಚೆನ್ನೈ ಸಮೀಪದ ಪೆರಂಬೂರ್ ಬಳಿಯ ಅವರ ನಿವಾಸಕ್ಕೆ ಬೈಕ್ ನಲ್ಲಿ ಆಗಮಿಸಿದ 6 ಮಂದಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಆರ್ಮಾಸ್ಟ್ರಾಂಗ್ ಅವರನ್ನು ಹತ್ಯೆಗೈದಿದ್ದರು.

ಘಟನೆ ಬೆನ್ನಲ್ಲೇ ಚೆನ್ನೈ ಪೊಲೀಸರು 8 ಮಂದಿ ಶಂಕಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ ಎಂದು ಚೆನ್ನೈ ಸೂಪರಿಟೆಂಡೆಂಟ್ ಪೊಲೀಸರು ದೃಢಪಡಿಸಿದ್ದಾರೆ.

ಹತ್ಯೆ ಘಟನೆ ಬೆನ್ನಲ್ಲೇ ಪೊಲೀಸರ 10 ವಿಶೇಷ ತಂಡವನ್ನು ರಚಿಸಲಾಗಿದ್ದು, ಘಟನಾ ಸ್ಥಳದ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಿದ್ದಾರೆ. ಸಿಸಿಟಿವಿಯಲ್ಲಿ ಕೃತ್ಯ ಎಸಗುತ್ತಿದ್ದಂತೆ ಆರೋಪಿಗಳು ಪರಾರಿ ಆಗಿರುವುದು ಕಂಡುಬಂದಿದೆ.

6 ಜನ ದುಷ್ಕರ್ಮಿಗಳು ಬಿಎಸ್ ಪಿ ರಾಜ್ಯಾಧ್ಯಕ್ಷ ಆರ್ಮಸ್ಟ್ರಾಂಗ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಆರ್ಮಸ್ಟ್ರಾಂಗ್ ಅವರನ್ನು ಕೂಡಲೇ ಆಸ್ಪತ್ರೆಗೆ ದಖಾಲಿಸಲಾಯಿತಾದರೂ ಅತೀವ ರಕ್ತಸ್ರಾವದಿಂದ ದಾರಿ ಮಧ್ಯದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರ್ಮಾಸ್ಟ್ರಾಂಗ್ ಅವರ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

ಚೆನ್ನೈನಲ್ಲಿ ಮಹಾನಗರ ಪಾಲಿಕೆ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಆರ್ಮಸ್ಟ್ರಾಂಗ್ ನಂತರ ಪೆರಂಬೂರ್ ಗೆ ಮರಳಿ ಅಲ್ಲಿ ಜೀವನ ನಡೆಸುತ್ತಿದ್ದರು. ಪೆರಂಬೂರಿನಲ್ಲಿ ಮನೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಕೆಲಸ ನೋಡಲು ಮನೆಯ ಬಳಿ ಬಂದಾಗ ದುಷ್ಕರ್ಮಿಗಳು ಹಲ್ಲೆ ಮಾಡಿ ಕೊಲೆಗೈದಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments