Thursday, September 19, 2024
Google search engine
Homeತಾಜಾ ಸುದ್ದಿಇಬ್ಬರು ಯೋಧರು ಹುತಾತ್ಮ ಬೆನ್ನಲ್ಲೇ 4 ಹತ್ಯೆಗೈದು ಸೇಡು ತೀರಿಸಿಕೊಂಡ ಸೇನೆ!

ಇಬ್ಬರು ಯೋಧರು ಹುತಾತ್ಮ ಬೆನ್ನಲ್ಲೇ 4 ಹತ್ಯೆಗೈದು ಸೇಡು ತೀರಿಸಿಕೊಂಡ ಸೇನೆ!

ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದು ಇದರ ಬೆನ್ನಲ್ಲೇ ಪ್ರತಿದಾಳಿ ನಡೆಸಿ ನಾಲ್ವರು ಉಗ್ರರನ್ನು ಸದೆಬಡಿಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾದ ಘಟನೆ ಜಮ್ಮು ಕಾಶ್ಮೀರದ ಕುಲ್ಗಾಮ್ ನಲ್ಲಿ ನಡೆದಿದೆ.

ಕುಲ್ಗಾಮ್ ಜಿಲ್ಲೆಯ ಎರಡು ಸ್ಥಳಗಳಲ್ಲಿ ಉಗ್ರರು ಅಡಗಿದ್ದಾರೆ ಎಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಎರಡು ಪ್ರತ್ಯೇಕ ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿತ್ತು.

ಭಾರತೀಯ ಸೇನೆ ಕಾರ್ಯಾಚರಣೆ ನಡೆಸುವ ವೇಳೆ ಉಗ್ರರು ಏಕಾಏಕಿ ದಾಳಿ ನಡೆಸಿದ್ದರಿಂದ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಮೊಡೆಗ್ರಾಮ್ ನಲ್ಲಿ ಸ್ಥಳೀಯ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ವೇಳೆ ಉಗ್ರರು ಭಾರೀ ಪ್ರಮಾಣದಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಸಿಆರ್ ಪಿಎಫ್ ಯೋಧ ಮೃತಪಟ್ಟಿದ್ದಾರೆ.

ಉಗ್ರರು ಸಿಕ್ಕಿ ಹಾಕಿಕೊಂಡಿರುವ ಭೀತಿಯಲ್ಲಿ ದಾಳಿ ನಡೆಸುತ್ತಿರುವುದನ್ನು ಮನಗಂಡ ಭಾರತೀಯ ಸೇನೆ ಪ್ರತಿದಾಳಿ ನಡೆಸಿತು. ಇದರಿಂದ ಉಗ್ರರು ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎಂದ ಪೊಲೀಸರು ತಿಳಿಸಿದ್ದಾರೆ.

ದಾಳಿಯ ವೇಳೆ ಭದ್ರತಾ ಸಿಬ್ಬಂದಿ ಡ್ರೋಣ್ ಬಳಸಿ ಉಗ್ರರ ಇರುವಿಕೆಯನ್ನು ಪತ್ತೆ ಹಚ್ಚಿದ್ದು, ನಾಲ್ವರು ಉಗ್ರರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಇದೇ ವೇಳೆ ಮತ್ತೊಂದು ಜಾಗದಲ್ಲಿ ಇನ್ನಿಬ್ಬರು ಉಗ್ರರು ಅಡಗಿರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರಿದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments