ಟಿ-20 ಏಷ್ಯಾಕಪ್ ಟೂರ್ನಿಗೆ ಭಾರತ ಮಹಿಳಾ ತಂಡವನ್ನು ಪ್ರಕಟಿಸಲಾಗಿದ್ದು, ಕನ್ನಡತಿ ಶ್ರೇಯಾಂಕಾ ಪಾಟೀಲ್ ಸ್ಥಾನ ಪಡೆದಿದ್ದಾರೆ.
ಜುಲೈ 19ರಿಂದ ಜು.28ರ ವರೆಗೆ ನಡೆಯಲಿರುವ 2024ರ ಮಹಿಳೆಯರ T20 ಏಷ್ಯಾಕಪ್ ಟೂರ್ನಿಗೆ 15 ಸದಸ್ಯರ ಭಾರತ ಮಹಿಳಾ ತಂಡವನ್ನು ಶನಿವಾರ ಪ್ರಕಟಿಸಲಾಗಿದೆ.
ಭಾರತ ಮಹಿಳಾ ತಂಡವನ್ನು ಹರ್ಮನ್‌ಪ್ರೀತ್ ಕೌರ್ ಮುನ್ನಡೆಸಲಿದ್ದು, ಭರ್ಜರಿ ಬ್ಯಾಟಿಂಗ್ ಫಾರ್ಮ್ ನಲ್ಲಿರುವ ಸ್ಮೃತಿ ಮಂದಾನ ಉಪನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯುತ್ತಿರುವ ತ್ರಿಪಕ್ಷೀಯ ಸರಣಿಗೆ ಶ್ರೇಯಾಂಕಾ ಪಾಟೀಲ್ ಆಯ್ಕೆಯಾಗಿದ್ದರೂ ಒಂದೇ ಒಂದು ಪಂದ್ಯದಲ್ಲೂ ಆಡಲು ಅವಕಾಶ ಪಡೆದಿಲ್ಲ. ಆದರೂ ಏಷ್ಯಾಕಪ್ ಗೆ ಪರಿಗಣಿಸಿರುವುದು ಅಚ್ಚರಿ ಮೂಡಿಸಿದೆ.
ಭಾರತ ಮಹಿಳಾ ತಂಡ
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶೆಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಯಾ ರೊಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಛೆಟ್ರಿ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭನಾ, ರಾಧಾ ಯಾದವ್, ಶ್ರೇಯಾಂಕಾ ಪಾಟೀಲ್, ಸಜನಾ ಸಜೀವನ್. ಮೀಸಲು ಆಟಗಾರ್ತಿಯರು: ಶ್ವೇತಾ ಸೆಹ್ರಾವತ್, ಸೈಕಾ ಇಶಾಕ್, ತನುಜಾ ಕನ್ವರ್, ಮೇಘನಾ ಸಿಂಗ್.