Friday, November 22, 2024
Google search engine
Homeಜಿಲ್ಲಾ ಸುದ್ದಿಜಯದೇವ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಸಾವು: ಮೈಸೂರಿನಲ್ಲಿ ಡೆಂಘೇಗೆ 2ನೇ ಬಲಿ

ಜಯದೇವ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಸಾವು: ಮೈಸೂರಿನಲ್ಲಿ ಡೆಂಘೇಗೆ 2ನೇ ಬಲಿ

ಮೈಸೂರಿನಲ್ಲಿ ಡೆಂಘೇ ಜ್ವರ ಅಬ್ಬರಿಸಿದ್ದು, ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಬಲಿಯಾಗಿದ್ದಾರೆ. ಇದರಿಂದ ಸಾಂಸ್ಕೃತಿಕ ನಗರಿ ಡೆಂಘೇ ಜ್ವರಕ್ಕೆ ಮೃತಪಟ್ಟವರ ಸಂಖ್ಯೆ 2ಕ್ಕೇರಿದೆ.

ಜಯದೇವ ಹೃದ್ರೋಗ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಲಲಿತಾ ಎಂಬವರು ಮೃತಪಟ್ಟಿದ್ದಾರೆ.

ಡೆಂಗ್ಯೂ ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೈಸೂರು ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಸದ್ಯ 35 ಮಂದಿ ಈ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಹುಣಸೂರು ಸಮುದಾಯ ಆರೋಗ್ಯಾಧಿಕಾರಿ ಡೆಂಗ್ಯೂನಿಂದ ಸಾವಿಗೀಡಾಗಿದ್ದರು.

ಕೆಲವು ದಿನಗಳ ಹಿಂದೆಯಷ್ಟೇ ಆಸ್ಪತ್ರೆಯ ವೈದ್ಯಾಧಿಕಾರಿ ಡೆಂಘ್ಯೂ ಕಾಯಿಲೆಯಿಂದ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇದೀಗ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಡೆಂಘೆಗೆ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಒಟ್ಟು 301 ಡೆಂಗ್ಯೂ ಸಕ್ರಿಯ ಪ್ರಕರಣಗಳಿವೆ. ಇಂದು ಒಂದೇ ದಿನ 159 ಹೊಸ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಸೋಂಕಿಗೆ ಇಂದು ಮೈಸೂರಿನ ಒಬ್ಬರು ಸೇರಿ ಇಬ್ಬರು ಬಲಿಯಾಗಿದ್ದಾರೆ. ಈವರೆಗೆ ಪ್ರಕರಣಗಳ ಸಂಖ್ಯೆ 7,165 ಕ್ಕೆ ಏರಿಕೆಯಾಗಿದೆ. ಒಟ್ಟು ಸಾವಿನ ಸಂಖ್ಯೆ 6 ಕ್ಕೆ ಏರಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments