ನೈಋತ್ಯ ಮುಂಗಾರು ಅಬ್ಬರದ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಮುಂಬೈನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕಳೆದೆರಡು ದಿನಗಳಿಂದ ನಗರದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳು ಕೆರೆಗಳಂತಾಗಿರುವುದರಿಂದ ವಾಹನ ಸಂಚಾರಕ್ಕೆ ದುಸ್ತರವಾಗಿದೆ.
ಮಳೆ ನೀರು ವಿದ್ಯುತ್ ಕಂಬಕ್ಕೆ ತಗುಲಿ ಶಾರ್ಟ್ ಸರ್ಕ್ಯೂಟ್ ಆಗಿದ್ದರಿಂದ ವೃದ್ದೆಯೊಬ್ಬರು ಮೃತಪಟ್ಟಿದ್ದಾರೆ. ಭಾರೀ ಮಳೆಯಿಂದಾಗಿ ಕೆಲವೇ ಗಂಟೆಗಳಲ್ಲಿ ಕೆಲವು ಪ್ರದೇಶಗಳಲ್ಲಿ ದಾಖಲೆಯ 300 ಮಿ.ಮೀ. ಮಳೆಯಾಗಿದೆ.
ಸುಮಾರು 50 ವಿಮಾನ ಸಂಚಾರ ರದ್ದುಗೊಳಿಸಲಾಗಿದ್ದು, ಮೆಟ್ರೋ ಸೇರಿದಂತೆ ಹಲವು ರೈಲು ಸಂಚಾರಗಳನ್ನು ರದ್ದುಗೊಳಿಸಲಾಗಿದೆ. ದೂರದ ರೈಲು ಮಾರ್ಗಗಳನ್ನು ಬದಲಾಯಿಸಲಾಗಿದೆ.