ಮಹಾರಾಷ್ಟ್ರ ವಿಧಾನ ಪರಿಷತ್ 11 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ 9 ಸ್ಥಾನಗಳಲ್ಲಿ ಜಯ ಸಾಧಿಸುವ ಮೂಲಕ ಮೇಲುಗೈ ಸಾಧಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ಬಿಜೆಪಿ, ಏಕಾಂತ್ ಶಿಂಧೆ ನೇತೃತ್ವದ ಶಿವಸೇನಾ ಬಣ ಮತ್ತು ಅಜಿತ್ ಪವಾರ್ ನೇತೃತ್ವದ ಎನ್ ಸಿಪಿ ಬಣ 9 ಸ್ಥಾನಗಳನ್ನು ಗೆಲ್ಲುವ ಮೂಲಕ ಮೇಲುಗೈ ಸಾಧಿಸಿದೆ.
11 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 12 ಮಂದಿ ಕಣದಲ್ಲಿದ್ದರು. ಬಿಜೆಪಿ ಗೋಪಿನಾಥ್ ಮುಂಡೆ ಅವರ ಪುತ್ರಿ ಪಂಕಜಾ ಮುಂಡೆ ಸೇರಿದಂತೆ 5 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ಏಕಾಂತ್ ಶಿಂಧೆ ಮತ್ತು ಅಜಿತ್ ಪವಾರ್ ಬಣದಿಂದ ತಲಾ 2 ಅಭ್ಯರ್ಥಿಗಳು ಕಣದಲ್ಲಿದ್ದರು. ಎಲ್ಲಾ ಅಭ್ಯರ್ಥಿಗಳು ಜಯ ಸಾಧಿಸಿ ಕ್ಲೀನ್ ಸ್ವೀಪ್ ಸಾಧನೆ ಮಾಡಿತು.
ಕಾಂಗ್ರೆಸ್, ಉದ್ದವ್ ಠಾಕ್ರೆ ನೇತೃತ್ವದ ಶಿವಸೇನೆ ಮತ್ತು ಶರದ್ ಪವಾರ್ ನೇತೃತ್ವದ ಎನ್ ಸಿಪಿಯ ಮಹಾರಾಷ್ಟ್ರ ವಿಕಾಸ್ ಅಂಗಡಿ ಮೈತ್ರಿ ಪಕ್ಷಗಳು ತಲಾ ಒಂದರಂತೆ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ಎರಡರಲ್ಲಿ ಜಯ ಸಾಧಿಸಿತು.