Thursday, September 19, 2024
Google search engine
Homeಕ್ರೀಡೆಡೆಲ್ಲಿ ಕ್ಯಾಪಿಟಲ್ಸ್ ಮುಖ್ಯ ಕೋಚ್ ಹುದ್ದೆಯಿಂದ ರಿಕಿ ಪಾಂಟಿಂಗ್ ವಜಾ!

ಡೆಲ್ಲಿ ಕ್ಯಾಪಿಟಲ್ಸ್ ಮುಖ್ಯ ಕೋಚ್ ಹುದ್ದೆಯಿಂದ ರಿಕಿ ಪಾಂಟಿಂಗ್ ವಜಾ!

ಆಸ್ಟ್ರೇಲಿಯಾದ ಬ್ಯಾಟಿಂಗ್ ದಂತಕತೆ ರಿಕಿ ಪಾಂಟಿಂಗ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಹುದ್ದೆಯಿಂದ ವಜಾ ಮಾಡಲಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ಇದುವರೆಗೆ ಒಂದು ಬಾರಿಯೂ ಪ್ರಶಸ್ತಿ ಗೆಲ್ಲದ ಕಾರಣ ಕೋಚ್ ಸ್ಥಾನದಿಂದ ಪಾಂಟಿಂಗ್ ಅವರನ್ನು ವಜಾ ಮಾಡಲಾಗಿದೆ ಎಂದು ಫ್ರಾಂಚೈಸಿ ಹೇಳಿಕೆಯಲ್ಲಿ ತಿಳಿಸಿದೆ.

2 ಬಾರಿ ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ 2019ರಲ್ಲಿ ಡೆಲ್ಲಿ ತಂಡದ ಕೋಚ್ ಹುದ್ದೆ ವಹಿಸಿಕೊಂಡಿದ್ದರು. 2021ರಲ್ಲಿ ಒಂದು ಬಾರಿ ತಂಡ ಫೈನಲ್ ಪ್ರವೇಶಿಸಿದ್ದು ಬಿಟ್ಟರೆ ತಂಡದ ಸಾಧನೆ ಕಳಪೆಯಾಗಿದೆ.

ರಿಕಿ ಪಾಂಟಿಂಗ್ ಅವರು ಕೋಚ್ ಆಗಿ 7 ವರ್ಷಗಳ ಕಾಲ ತಂಡದ ಜೊತೆಗಿದ್ದಾರೆ. ಅವರ ಗರಡಿಯಲ್ಲಿ ಒಂದು ಬಾರಿಯೂ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಆದ್ದರಿಂದ ಕೋಚ್ ಸಿಬ್ಬಂದಿ ತಂಡದಲ್ಲಿ ಬದಲಾವಣೆ ಮಾಡಲು ಉದ್ದೇಶಿಸಲಾಗಿದ್ದು, ಪಾಂಟಿಂಗ್ ಮುಂದಿನ ಆವೃತ್ತಿಯಿಂದ ತಂಡದ ಜೊತೆಗೆ ಇರುವುದಿಲ್ಲ ಎಂದು ಫ್ರಾಂಚೈಸಿ ಹೇಳಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments