ಕೆಎಸ್ಸಾರ್ಟಿಸಿ ಬಸ್ ಪ್ರಯಾಣ ದರವನ್ನು ಶೇ.5ರಿಂದ 20 ಏರಿಕೆ ಮಾಡಲು ರಾಜ್ಯ ಸರ್ಕಾರಕ್ಕೆ ಕೆಎಸ್ಸಾರ್ಟಿಸಿ ನಿಗಮ ಪ್ರಸ್ತಾಪ ಸಲ್ಲಿಸಿದೆ.
ತುಮಕೂರಿನಲ್ಲಿ ಭಾನುವಾರ ಮಾಡಿದ ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ಇದರಿಂದ ಬಸ್ ನಿರ್ವಹಣೆ ವೆಚ್ಚ ಹೆಚ್ಚಾಗಿದೆ. ಇದರಿಂದ ವಾರ್ಷಿಕ 295 ಕೋಟಿ ರೂ. ನಷ್ಟವಾಗುತ್ತಿದೆ ಆದ್ದರಿಂದ ಶೀಘ್ರದಲ್ಲೇ ಬಸ್ ಪ್ರಯಾಣ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾಪನೆ ಸಲ್ಲಿಸಲಾಗಿದೆ ಎಂದರು.
ಕೆಎಸ್ಸಾರ್ಟಿಸಿ ನೌಕರರಿಗೆ ವೇತನ ಪರಿಷ್ಕರಣೆ ಹಾಗೂ ಸೌಲಭ್ಯಗಳನ್ನು ಹೆಚ್ಚಿಸಬೇಕಾಗಿದೆ. ನೌಕರರಿಗೆ 2019ರಿಂದ ವೇತನ ಹೆಚ್ಚಳ ಮಾಡಿಲ್ಲ. 2020ರಲ್ಲೇ ವೇತನ ಪರಿಷ್ಕರಣೆ ಮಾಡಬೇಕಿತ್ತು. ಈ ಬಾರಿ ಮಾಡಬೇಕಾಗಿದೆ ಎಂದು ಅವರು ಹೇಳಿದರು.
ವೇತನ ಹೆಚ್ಚಿಸಲು ಸಾಕಷ್ಟು ಹಣದ ಕೊರತೆ ಇದ್ದು, ಶೇ.5ರಿಂದ 20ರಷ್ಟು ಪ್ರಯಾಣ ದರ ಏರಿಕೆ ಮಾಡಬೇಕು ಎಂದು ಪ್ರಸ್ತಾಪದಲ್ಲಿ ವಿವರಿಸಲಾಗಿದೆ. ಸಾರಿಗೆ ಸಂಸ್ಥೆ ಉಳಿಯಬೇಕಾದರೆ ಬಸ್ ದರ ಏರಿಕೆ ಅನಿವಾರ್ಯ ಎಂದು ಶ್ರೀನಿವಾಸ್ ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಇದರ ಹೊರತಾಗಿಯೂ ಕೆಎಸ್ಸಾರ್ಟಿಸಿ ಬಸ್ ಪ್ರಯಾಣದ ಹೆಚ್ಚಳ ಮಾಡಿ 5 ವರ್ಷ ಆಗಿದೆ ಎಂದು ಅವರು ಹೇಳಿದರು.