Friday, November 22, 2024
Google search engine
Homeತಾಜಾ ಸುದ್ದಿಮುಡಾ ಹಗರಣದ ತನಿಖೆಗೆ ಏಕಸದಸ್ಯ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ಆದೇಶ

ಮುಡಾ ಹಗರಣದ ತನಿಖೆಗೆ ಏಕಸದಸ್ಯ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ಆದೇಶ

ವಿಧಾನ ಮಂಡಲ ಅಧಿವೇಶನಕ್ಕೆ ಕೆಲವೇ ಕ್ಷಣಗಳು ಬಾಕಿ ಇರುವಾಗಲೇ ರಾಜ್ಯ ಸರ್ಕಾರ ಭಾರೀ ಚರ್ಚೆಗೆ ಕಾರಣವಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಏಕಸದಸ್ಯ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಿವೃತ್ತ ನ್ಯಾಯಾಧೀಶ ಪಿ.ಎನ್‌ ದೇಸಾಯಿ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ಭಾನುವಾರ ಆದೇಶ ಹೊರಡಿಸಿದ್ದು, 6 ತಿಂಗಳ ಅವಧಿಯಲ್ಲಿ ಸಂಪೂರ್ಣ ವರದಿ ನೀಡುವಂತೆ ಗಡುವು ವಿಧಿಸಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆ ವಿಷಯದಲ್ಲಿ ಆರೋಪಗಳು ಕೇಳಿ ಬರುತ್ತಿದ್ದು, ಪ್ರತಿಪಕ್ಷಗಳು ವ್ಯಾಪಕ ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ರಚಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments