ಅಕ್ರಮ ಆಸ್ತಿ ಸಂಪಾದನೆ ಆರೋಪದಲ್ಲಿ ಸಿಬಿಐ ತಮ್ಮ ವಿರುದ್ಧ ದಾಖಲಿಸಿರುವ ಎಫ್ ಐಆರ್ ರದ್ದುಕೋರಿ ಡಿಸಿಎಂ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ನ್ಯಾಯಮೂರ್ತಿ ಬೆಲಾ ಎಂ. ತ್ರಿವೇದಿ ಮತ್ತು ನ್ಯಾಯಮೂರ್ತಿ ಎಸ್.ಸಿ. ಶರ್ಮ ಅವರನ್ನೊಳಗೊಂಡ ವಿಭಾಗೀಯ ಪೀಠ, ಕರ್ನಾಟಕ ಹೈಕೋರ್ಟ್ ತೀರ್ಪಿಗೆ ಮಧ್ಯ ಪ್ರವೇಶಿಸಲು ನಿರಾಕರಿಸಿತು.
ಅಕ್ರಮ ಆಸ್ತಿ ಸಂಪಾನೆ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಡಿಕೆ ಶಿವಕುಮಾರ್ 2024 ಅಕ್ಟೋಬರ್ 9ರಂದು ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ಹೈಕೋರ್ಟ್ ಆದೇಶಕ್ಕೆ ಮಧ್ಯಪ್ರವೇಶಿಸಲು ನಿರಾಕರಿಸಿದ ನ್ಯಾಯಮೂರ್ತಿಗಳು, ಕ್ಷಮಿಸಿ, ನಿಮ್ಮ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ತಿಳಿಸಿದರು.
2013 ಮತ್ತು 2018ರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಿಕೆ ಶಿವಕುಮಾರ್ ಅವರ ಆಸ್ತಿ ದಿಢೀರ್ ಏರಿಕೆಯಾಗಿದ್ದು, ಅಕ್ರಮ ಮೂಲಗಳಿಂದ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಿ ಸಿಬಿಐ ಎಫ್ ಐಆರ್ ದಾಖಲಿಸಿತ್ತು.
2020 ಸೆಪ್ಟೆಂಬರ್ 3ರಂದು ಸಿಬಿಐ ಎಫ್ ಐಆರ್ ದಾಖಲಿಸಿದ್ದು, 2021ರಂದು ಡಿಕೆ ಶಿವಕುಮಾರ್ ಹೈಕೋರ್ಟ್ ನಲ್ಲಿ ಚಾಲೆಂಜ್ ಮಾಡಿ ಅರ್ಜಿ ಸಲ್ಲಿಸಿದ್ದರು.