ದೇಶದ್ರೋಹಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ತೆಹ್ರೀಕ್ –ಇ- ಇನ್ಸಾಫ್ ಪಾಕಿಸ್ತಾನ ಸರ್ಕಾರ ನಿಷೇಧಿಸಲು ಮುಂದಾಗಿದೆ.
ತೆಹ್ರಿಕ್-ಇ- ಇನ್ಸಾಫ್ ಪಕ್ಷವನ್ನು ನಿಷೇಧಿಸುವಂತೆ ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲು ಪಾಕಿಸ್ತಾನದ ನೂತನ ಸಮ್ಮಿಶ್ರ ಸರ್ಕಾರ ಮುಂದಾಗಿದೆ ಎಂದು ಕೇಂದ್ರ ಮಾಹಿತಿ ಸಚಿವ ಅತಾವುಲ್ಲಾ ತಾರ್ ತಿಳಿಸಿದ್ದರೆ.
ಸರ್ಕಾರದ ಅರ್ಜಿಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳಲಿದ್ದು, ವಿಚಾರಣೆ ನಂತರ ಶೀಘ್ರದಲ್ಲೇ ತೀರ್ಪು ನೀಡುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.
ಇಮ್ರಾನ್ ಖಾನ್ ಪ್ರಧಾನಿ ಆಗಿದ್ದಾಗ ಸರ್ಕಾರಕ್ಕೆ ಬಂದ ಉಡುಗೊರೆಗಳನ್ನು ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಹಲವಾರು ಪ್ರಕರಣಗಳನ್ನು ದಾಖಲಿಸಿ ಜೈಲಿಗೆ ಹಾಕಲಾಗಿದೆ.
ಜೈಲಿನಲ್ಲಿರುವ ಇಮ್ರಾನ್ ಖಾನ್ ಅವರನ್ನು ಬಂಧಿಸಿರುವುದು ಅಂತಾರಾಷ್ಟ್ರೀಯ ಕಾನೂನುಗಳಿಗೆ ವಿರುದ್ಧವಾಗಿದ್ದು, ಕೂಡಲೇ ಬಿಡುಗಡೆ ಮಾಡುವಂತೆ ವಿಶ್ವಸಂಸ್ಥೆ ಸೂಚಿಸಿತ್ತು. ಇದರ ಹೊರತಾಗಿಯೂ ಪಾಕಿಸ್ತಾನ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಬದಲಾಗಿ ಅವರ ಪಕ್ಷವನ್ನೇ ನಿಷೇಧಿಸಲು ಮುಂದಾಗಿದೆ.