ಚಿಲಿಯ ಅಂಟಫೊಗೊಸ್ಟಾದಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.
ಯುರೋಪಿಯನ್-ಮೆಡಿಟರೇನಿಯನ್ ಸೆಸಿಮೊಲೊಜಿಕಲ್ ಕೇಂದ್ರ ಭೂಕಂಪನ ಮಾಹಿತಿ ನೀಡಿದ್ದು, ಶುಕ್ರವಾರ ಮುಂಜಾನೆ ಸಂಭವಿಸಿದ ಭೂಕಂಪನ ರಿಕ್ಟರ್ ಮಾಪಕದಲ್ಲಿ 7.3ರಷ್ಟು ತೀವ್ರತೆ ದಾಖಲಿಸಿದೆ.
ಭೂಕಂಪನದಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ. ಆದರೆ ಹಲವಾರು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
ಈ ವರ್ಷದ ಆರಂಭದಲ್ಲಿ ಅಂದರೆ ಜನವರಿಯಲ್ಲಿ 5.8 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದ್ದು, 2020ರಲ್ಲಿ ಸಂಭವಿಸಿದ ಭೂಕಂಪನದಲ್ಲಿ 500ಕ್ಕೂ ಹೆಚ್ಚು ಮಂದಿ ಅಸುನೀಗಿದ್ದರು.